ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಕೆಶಿ

Spread the love

ಬೆಂಗಳೂರು: ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಮಾತನಾಡಿ, ಬೇರೆ ಕಡೆ ಶೇ.50ರಷ್ಟು ಮೀಸಲಿರುತ್ತದೆ ಎಂದರು.

ಬಿಸಿಸಿಐ ಟಿಕೆಟ್ ವಿಚಾರಕ್ಕೆ ಸ್ಥಳಾಂತರ ನಿರ್ಧಾರ ಮಾಡಿದ್ದೇವೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಈ ರೀತಿ ಹೇಳಿಕೆ ನೀಡಲಿ, ನಾನು ಅದಕ್ಕೆ ಸರಿಯಾದ ಉತ್ತರ ಕೊಡುತ್ತೇನೆ ಎಂದರು.

ಸಿಎಂ, ಡಿಸಿಎಂ ದೆಹಲಿ ಭೇಟಿ ವಿಚಾರ ಕೇಳಿದಾಗ, ಹೈಕಮಾಂಡ್ ಕರೆದಾಗ ನಾವು ಹೋಗುತ್ತೇವೆ. ಕರೆಯದೇ ಹೋಗುವುದು ಸರಿಯಲ್ಲ. ಕರೆಯುತ್ತಾರೆ, ಕರೆದಾಗ ನಾವು ಹೋಗುತ್ತೇವೆ ಎಂದರು.


Spread the love

About Laxminews 24x7

Check Also

ನಕಲಿ ವೈದ್ಯರ ಆಸ್ಪತ್ರೆ ಮೇಲೆ ದಾಳಿ

Spread the loveಚಿಕ್ಕೋಡಿ: ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ದೂರು ಕೇಳಿ ಬಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ