Breaking News

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

Spread the love

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿಯವರು  ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ.

ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಪೊಲೀಸ್ ಅಧಿಕಾರಿ ಎ19 ಚೆನ್ನಕೇಶವ್ ಟೆಂಗರಿಕರ್ ಹಾಗೂ ಚಂದ್ರಶೇಖರ್ ಇಂಡಿ ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮುಗದಂ ಮತ್ತು ನ್ಯಾ.ರಾಜೇಶ್ ರೈ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು.

ಚೆನ್ನಕೇಶವ್ ಟಿಂಗರಿಕರ್ ಪರವಾಗಿ ಹಿರಿಯ ವಕೀಲ ಪಿಪಿ ಹೆಗ್ಡೆ, 7 ವರ್ಷ ಜೈಲು ಶಿಕ್ಷೆ ಆಗಿದ್ದು, ಜಾಮೀನು ನೀಡಬಹುದು ಎಂದು ಮನವಿ ಮಾಡಿದರು. ಜಾಮೀನು ನೀಡದಂತೆ ಸಿಬಿಐ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.

ವಾದಗಳನ್ನು ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿದೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ