Breaking News

ವೈದ್ಯ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ನೇಣಿಗೆ ಶರಣಾದ ನರ್ಸ್‌ – ಅಕ್ರಮ ಸಂಬಂಧ ಶಂಕೆ

Spread the love

ರಾಮನಗರ: ವೈದ್ಯನ  ಸಾವಿನ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಸಹ ಆತ್ಮಹತ್ಯೆಗೆ ಶರಣಾದ ಘಟನೆ ಕನಕಪುರ  ನಗರದ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಎರಡು ದಿನಗಳ ಅಂತರದಲ್ಲಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ನೇಣಿಗೆ ಶರಣಾದ ನರ್ಸ್. 2 ದಿನಗಳ ಹಿಂದೆ ಕೌಟುಂಬಿಕ ಕಲಹದಿಂದ ಕನಕಪುರ ನವೋದಯ ಆಸ್ಪತ್ರೆ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಡಾ.ಚೇತನ್ ಅವರ ಆಸ್ಪತ್ರೆಯಲ್ಲಿ ಸಾಕಷ್ಟು ವರ್ಷಗಳಿಂದ ನರ್ಸ್ ಸರಸ್ವತಿ ಕೆಲಸ ಮಾಡಿಕೊಂಡಿದ್ದರು. ಮೊನ್ನೆ ಮನೆಯಲ್ಲಿ ಜಗಳ ಮಾಡಿಕೊಂಡು ವೈದ್ಯರು ನೇಣಿಗೆ ಶರಣಾಗಿದ್ದರು.

ವೈದ್ಯ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ನರ್ಸ್ ಕೂಡಾ ಆತ್ಮಹತ್ಯೆಗೆ ಶರಣಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಡಾಕ್ಟರ್ ಜೊತೆ ನರ್ಸ್‌ಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಈ ಸಂಬಂಧ ಕನಕಪುರ ಟೌನ್ ಪೊಲೀಸ್ (Police) ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ