Breaking News

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ಗೆ ಬೆಂಕಿ – ಓರ್ವ ಸಿಬ್ಬಂದಿ ಸಾವು, ನಾಲ್ವರ ಸ್ಥಿತಿ ಗಂಭೀರ

Spread the love

ಬೆಂಗಳೂರು: ಇಲ್ಲಿನ ನಾಗರಬಾವಿಯ  ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಖಾಸಗಿ ಹೋಟೆಲ್‌ಗೆ ಬೆಂಕಿ ತಗುಲಿ, ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಮೃತ ಸಿಬ್ಬಂದಿಯನ್ನು ರಾಜ್‌ಕುಮಾರ್ ಎಂದು ಗುರುತಿಸಲಾಗಿದ್ದು, ನಾಲ್ವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶುಕ್ರವಾರ (ಮೇ 8) ತಡರಾತ್ರಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್‌ನಲ್ಲಿ ಕೆಲಸ ಮಾಡುವ ಎಂಟು ಜನ ಸಿಬ್ಬಂದಿ ಅದೇ ಹೋಟೆಲ್‌ನ ಮೇಲಿನ ಫ್ಲೋರ್‌ನಲ್ಲಿ ವಾಸವಿದ್ರು. ಬೆಂಕಿಯ ಕೆನ್ನಾಲಿಗೆ ಮೇಲಿನ ಮಹಡಿಗೂ ಹಬ್ಬಿದ್ದು, ತಕ್ಷಣ ಅಲ್ಲಿದ್ದ ಸಿಬ್ಬಂದಿ ಕೆಳಗೆ ಇಳಿಯೋಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಬೆಂಕಿ ಸಂಪೂರ್ಣ ಅವರಿಸಿಕೊಂಡು ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾಗಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ – ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ‌

Spread the loveಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ