Breaking News

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದ ಸಮರ್ಥ ಶಾಮನೂರು

Spread the love

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ಸಲ್ಲಿಸಿದರು.

ಲಕ್ಷ್ಮೀ ಹೆಬ್ಬಾಳಕರ್ ಅವರು ದಾವಣಗೆರೆ ಉಪಚುನಾವಣೆ ವೇಳೆ ಅಲ್ಲಿಯೇ ವಾಸ್ತವ್ಯ ಹೂಡಿ ಪ್ರಚಾರ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಸಮರ್ಥ ಅವರು ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಂತಾನಹರಣ ಚಿಕಿತ್ಸೆ ವೇಳೆ ಕರುಳು ಕಟ್ – ವೈದ್ಯರ ಯಡವಟ್ಟಿನಿಂದ ಮಹಿಳೆ ಸಾವು: ಪತಿ ಆರೋಪ

Spread the loveಚಿಕ್ಕಬಳ್ಳಾಪುರ: ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಕರುಳು ಕತ್ತರಿಸಿ ವೈದ್ಯರ ಯಡವಟ್ಟು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ