Breaking News

ಕೋಟಿ ರೂ. ವೆಚ್ಚದಲ್ಲಿ ಶ್ರೀ ಬ್ರಹ್ಮಲಿಂಗ ಸಮುದಾಯ ಭವನ: ಕಾಲಂ ಸ್ಲ್ಯಾಬ್ ಪೂಜೆ

Spread the love

ನಿಲಜಿಯಲ್ಲಿ ಸುಮಾರು 1 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಬ್ರಹ್ಮಲಿಂಗ ಸಮುದಾಯ ಭವನದ ಕಾಲಂ ಪೂಜೆ ಹಾಗೂ ಸ್ಲ್ಯಾಬ್ (ಕಾಂಕ್ರೀಟ್) ಹಾಕುವ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪ್ರಮುಖರೊಂದಿಗೆ ಸೇರಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಗ್ರಾಮದ ಸರ್ವತೋಮುಖ ಅಭಿವೃದ್ಧಿ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಭವನವು ಶೀಘ್ರದಲ್ಲೇ ಲೋಕಾರ್ಪಣೆಗೊಂಡು ಸಾರ್ವಜನಿಕ ಸೇವೆಗೆ ಸಿದ್ಧವಾಗಲಿದೆ.

ಗ್ರಾಮಸ್ಥರು, ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆ

Spread the loveಮಂಗಳೂರು: ಬಂಟ್ವಾಳದ  ನರಿಕೊಂಬು  ಗ್ರಾಮದ ಶಾಲೆಯಲ್ಲಿ ಅಡುಗೆ ಮಾಡುವಾಗ ತೆಂಗಿನ ಕಾಯಿ ತುರಿಯುವ ವಿದ್ಯುತ್ ಯಂತ್ರಕ್ಕೆ ಸಿಲುಕಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ