Breaking News

ಮೇ 10 ರಂದು ಬೆಂಗಳೂರಿನ ರಾಜಾಜಿನಗರದಲ್ಲಿರುವ ಕೆಎಲ್‌ಇ ಶಾಲೆಯ ನಾಮಕರಣ ಸಮಾರಂಭ

Spread the love

ಕೆಎಲ್‌ಇ ಸಂಸ್ಥೆಯ ಬೆಂಗಳೂರಿನ ರಾಜಾಜಿನಗರದ ಎಸ್.ನಿಜಲಿಂಗಪ್ಪ ಕಾಲೇಜು ಆವರಣದಲ್ಲಿರುವ ‘ಕೆಎಲ್‌ಇ ಸಂಸ್ಥೆಯ ಸಿಬಿಎಸ್‌ಇ ಆಂಗ್ಲ ಮಾಧ್ಯಮ ಶಾಲೆ’ಯ ನಾಮಕರಣ ಸಮಾರಂಭವು ಇದೇ ರವಿವಾರ 10 ಮೇ 2026 ರಂದು ಸಂಜೆ 4 ಗಂಟೆಗೆ ಜರುಗಲಿದೆ.

ಮುಖ್ಯ ಅತಿಥಿಗಳಾಗಿ ಭಾರತ ಸರ್ಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನ, ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ ಜೋಶಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷರಾದ ರುದ್ರಪ್ಪಾ ಎಂ. ಲಮಾಣಿ ಹಾಗೂ ಬೆಳಗಾವಿ ಕೆಎಲ್‌ಇ ಕಾಹೆರ್ ಹಾಗೂ ಹುಬ್ಬಳ್ಳಿ ಕೆಎಲ್‌ಇಟೆಕ್ ವಿವಿ ಕುಲಾಧಿಪತಿಗಳಾದ ಡಾ.ಪ್ರಭಾಕರ ಕೋರೆ, ಮುಂಬಯಿ ಚಿತ್ರ ನಿರ್ಮಾಪಕಿ ಅರುಣಾರಾಜೆ ಪಾಟೀಲ ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ಕೌಜಲಗಿಯವರು ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಕರ‍್ಯಾಧ್ಯಕ್ಷರಾದ ಅಮೀತ ಕೋರೆ, ಶ್ರೀ ಕೆ.ಎಫ್.ಪಾಟೀಲ ಚಾರಿಟೇಬಲ್ ಟ್ರಸ್ಟ್ ಸದಸ್ಯರು ಉಪಸ್ಥಿತರಿರುವರು. 11 ಮೇ 2026 ರಂದು ನಿಗದಿಯಾಗಿದ್ದ ಈ ಸಮಾರಂಭವು 10 ಮೇ, 2026 ರಂದು ಮರುನಿಗದಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ