Breaking News

ಪಂಜಾಬ್ ಸಚಿವ ಸಂಜೀವ್ ಅರೋರಾ ಬಂಧಿಸಿದ ಇ.ಡಿ

Spread the love

ಚಂಡೀಗಢ: ಪಂಜಾಬ್ ಇಂಧನ ಸಚಿವ ಸಂಜೀವ್ ಅರೋರಾ ಅವರನ್ನು ಇ.ಡಿ  ಬಂಧಿಸಿದೆ.

ಅರೋರಾ ಮತ್ತು ಇತರ ಕೆಲವು ಸಚಿವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಶನಿವಾರ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ  ಅವರನ್ನು ಬಂಧಿಸಿದೆ. ಈ ಕ್ರಮವನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತೀವ್ರವಾಗಿ ಖಂಡಿಸಿದ್ದಾರೆ. 

62 ವರ್ಷದ ಅರೋರಾ, ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಎಎಪಿ ಶಾಸಕ. ಅರೋರಾ ಮತ್ತು ಅವರ ಸಂಸ್ಥೆಗಳಿಗೆ ಸಂಬಂಧಿಸಿದ ನಾಲ್ಕು ಸ್ಥಳಗಳಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ, 2002 ರ ಅಡಿಯಲ್ಲಿ ದಾಳಿ ನಡೆಸಿತು. ಚಂಡೀಗಢ ಮತ್ತು ದೆಹಲಿ-NCR ಪ್ರದೇಶದಲ್ಲಿ ದಾಳಿ ನಡೆಸಲಾಯಿತು. ಸಚಿವರನ್ನು ಚಂಡೀಗಢದ ಸೆಕ್ಟರ್ 2 ನಲ್ಲಿರುವ ಅವರ ಅಧಿಕೃತ ನಿವಾಸದಿಂದ ಬಂಧಿಸಲಾಯಿತು.

ಈ ವರ್ಷ ಅರೋರಾ ಮೇಲೆ ದಾಳಿ ನಡೆಯುತ್ತಿರುವುದು ಇದು ಮೂರನೇ ಬಾರಿಯಾಗಿದೆ. ಈ ತಿಂಗಳ ಆರಂಭದಲ್ಲಿ ಮತ್ತು ಏಪ್ರಿಲ್‌ನಲ್ಲಿ ಅವರ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿದೆ. ದಾಳಿಗಳ ಕುರಿತು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಕೇಜ್ರಿವಾಲ್, ಪಕ್ಷವು ಜಾರಿ ನಿರ್ದೇಶನಾಲಯದಂತಹ ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ATM ದರೋಡೆಕೋರರು ಕೊನೆಗೂ ಅರೆಸ್ಟ್‌

Spread the loveಬಿಹಾರದಲ್ಲಿ  ಆರೋಪಿಗಳ ಕಾರು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಅಮನ್‌ಕುಮಾರ್ ಸಿಂಗ್ & ಅಲೋಕ್‌ಕುಮಾರ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ‌‌‌‌. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ