Breaking News

ಬಿರುಗಾಳಿ ಸಹಿತ ಭಾರೀ ಮಳೆಗೆ ಧರೆಗುರುಳಿದ ಬೃಹತ್ ಮರ – 2 ಗಂಟೆ ವಾಹನ ಸಂಚಾರ ಸ್ಥಗಿತ

Spread the love

ಚಿಕ್ಕೋಡಿ: ತಾಲೂಕಿನ  ವಿವಿಧೆಡೆ ಬಿರುಗಾಳಿ ಸಹಿತ ಭಾರೀ  ಮಳೆಯಾಗಿದೆ. ಬಿರುಗಾಳಿಯ ಅಬ್ಬರಕ್ಕೆ ಚಿಕ್ಕೋಡಿ – ಹುಕ್ಕೇರಿ ರಸ್ತೆಯ ಸಂಕೇಶ್ವರ ಕ್ರಾಸ್ ಬಳಿ ರಸ್ತೆ ಮೇಲೆ ಬೃಹದಾಕಾರದ ಮರ ನೆಲಕ್ಕರುಳಿದೆ.

ಸ್ಥಳಕ್ಕೆ ಚಿಕ್ಕೋಡಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ಮರವನ್ನು ತೆಗೆಯುವ ಕಾರ್ಯ ಮಾಡಿದ್ದಾರೆ. ಸುಮಾರು 2 ಗಂಟೆಗಳ ಬಳಿಕ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಇಂದು ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಮಳೆಯಾಗಿದೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ