Breaking News

ಆಟವಾಡ್ತಿದ್ದ ಪುಟಾಣಿಗಳ ಮೇಲೆ ಬಿದ್ದ ಕಾಂಪೌಂಡ್‌ ಗೇಟ್ – ಸ್ಥಳದಲ್ಲೇ ಮಗು ಸಾವು

Spread the love

ಬೆಂಗಳೂರು: ಮಕ್ಕಳ ಗುಂಪೊಂದು ಆಟವಾಡುತ್ತಿರುವಾಗ ಕಾಂಪೌಂಡ್ ಗೇಟ್ ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ.

ಅವಘಡದಲ್ಲಿ ಗೌಸಿಯಾ ಎಂಬ 5 ವರ್ಷದ ಮಗು ಸಾವನ್ನಪ್ಪಿದೆ. ಅಣ್ಣ ಇಮಾಮ್, ತಂಗಿ ಶಕಿಲಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ 3 ವರ್ಷದ ಮಗು ಸುಮಯ್ ಸ್ಥಿತಿ ಗಂಭೀರವಾಗಿದೆ.

ಇಮಾಮ್ ರಮೀಜಾ ದಂಪತಿ ಮಗು ಗೌಸಿಯಾ. ಇವರು ಕಳೆದ 5 ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ ಬಂದಿದ್ದರು. ಬಸ್ ನಿಲ್ದಾಣದ ಬಳಿ ಹಣ್ಣಿನ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ದಂಪತಿ, ರವಿಶಂಕರ್ ಎಂಬುವವರಿಗೆ ಸೇರಿದ್ದ ಮನೆಯಲ್ಲಿ ವಾಸವಾಗಿದ್ದರು.

ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಮಾನತುಗೊಂಡಿದ್ದ ಲೇಡಿ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಸಂಪತ್ತು: ವಜ್ರ, ಚಿನ್ನ, ಫ್ಲಾಟ್‌ಗಳು ಪತ್ತೆ, ಎಸಿಬಿ ಅಧಿಕಾರಿಗಳೇ ಶಾಕ್

Spread the loveಹೈದರಾಬಾದ್: ಅಮಾನತುಗೊಂಡಿದ್ದ ತಹಶೀಲ್ದಾರ್ ಮತ್ತು ಜಂಟಿ ಸಬ್​ ರಿಜಿಸ್ಟ್ರಾರ್ ತುಮ್ಮಕೊಮ್ಮ ಸುಚರಿತ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ