Breaking News

ಪುದುಚೇರಿಯ ಶನೇಶ್ವರ ದೇವಸ್ಥಾನಕ್ಕೆ ಡಿಸಿಎಂ ಭೇಟಿ

Spread the love

ಬೆಂಗಳೂರು: ತಮಿಳುನಾಡು  ಕಾಂಗ್ರೆಸ್ಶಾಸಕರು ಬೆಂಗಳೂರಿಗೆ ಬಂದ ಬಗ್ಗೆ ಹರಡಿರುವ ವದಂತಿಗಳೆಲ್ಲಾ ಸುಳ್ಳು, ಯಾವ ರೆಸಾರ್ಟ್‌ಗೂ ಬಂದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಸ್ಪಷ್ಟನೆ ನೀಡಿದರು.

ನೆರೆರಾಜ್ಯ ತಮಿಳುನಾಡಿನ ಕಾಂಗ್ರೆಸ್ ಶಾಸಕರು ಹೈಜಾಕ್ ಭೀತಿಯಿಂದ ಬೆಂಗಳೂರಿನ ರೆಸಾರ್ಟ್‌ಗೆ ಶಿಫ್ಟ್ ಆಗುತ್ತಿದ್ದಾರೆ ಎಂಬ ವದಂತಿಗಳ ಕುರಿತು ಅವರು ಪ್ರತಿಕ್ರಿಯಿಸಿದರು.

ಪುದುಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದರು. ಈಗಲ್ಟನ್ ರೆಸಾರ್ಟ್ ರಿಪೇರಿಗಾಗಿ ಮುಚ್ಚಿದೆ ಎಂದು ಕೇಳಿಬರುತ್ತಿರುವ ಮಾತುಗಳೆಲ್ಲಾ ಸುಳ್ಳು. ಶಾಸಕರು ಹೈದರಾಬಾದ್‌ಗೆ ಹೋಗಿದ್ದಾರೆ ಅಂತ ಟಿವಿಯಲ್ಲಿ ನೋಡಿದೆ ಅಷ್ಟೇ. ಪಾರ್ಟಿ ಹೈಕಮಾಂಡ್ ಈ ಬಗ್ಗೆ ನನ್ನ ಬಳಿ ಏನೂ ಚರ್ಚಿಸಿಲ್ಲ. ಹೈಕಮಾಂಡ್ ಸೂಚನೆಯಂತೆ ನಾನು ಪ್ರಚಾರಕ್ಕೆ ಮತ್ತು ಪ್ರಣಾಳಿಕೆ ಬಿಡುಗಡೆಗೆ ಹೋಗಿದ್ದೆ. ತಮಿಳುನಾಡು ಬಗ್ಗೆ ನನಗೆನೂ ಗೊತ್ತಿಲ್ಲ ಮತ್ತು ಯಾವ ಶಾಸಕರು ಕೂಡ ನನ್ನ ಜೊತೆ ಸಂಪರ್ಕದಲ್ಲಿಲ್ಲ, ಎಂದು ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಅವರಿಗೆ ಜನ್ಮದಿನವಿದ್ದರೆ ಶುಭವಾಗಲಿ. ಅವರು ರಾಜ್ಯಕ್ಕೆ ಸೇವೆ ಸಲ್ಲಿಸಿದ್ದಾರೆ, ಅವರಿಗೆ ಗೌರವ ನೀಡಬೇಕು. ಭಗವಂತ ಅವರಿಗೆ ಒಳ್ಳೆಯ ಆರೋಗ್ಯ ನೀಡಲಿ. ರಾಜಕೀಯವಾಗಿ ನಮ್ಮ ವಿಚಾರಧಾರೆಗಳು ಬೇರೆಯಾಗಿರಬಹುದು, ಆದರೆ ಅವರ ಸೇವೆಗೆ ಗೌರವವಿದೆ ಎಂದರು.

ತಮ್ಮ ಪುದುಚೇರಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ ಅವರು, ಬಹಳ ದಿನಗಳಿಂದ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಮುಖ್ಯವಾಗಿ ಶನೇಶ್ವರ ಸ್ವಾಮಿಯ ದರ್ಶನ ಪಡೆದಿರಲಿಲ್ಲ, ಹಾಗಾಗಿ ಪುದುಚೇರಿಯ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿರುವೆ ಎಂದು ತಿಳಿಸಿದರು.

ನಗರದಲ್ಲಿ ಬಿದ್ದಿರುವ ಮರಗಳ ತೆರವು ಕುರಿತ ವಿಪಕ್ಷ ನಾಯಕ ಆರ್.ಅಶೋಕ್ ಅವರ ಟೀಕೆಗೆ ಉತ್ತರಿಸಿದ ಡಿಸಿಎಂ, ಪೊಲೀಸರು 480 ಮರದ ಲೀಸ್ಟ್ ಕೊಟ್ಟಿದ್ದಾರೆ. ಬೀಳುವ ಎಲ್ಲಾ ಮರಗಳನ್ನ ಕಟ್ ಮಾಡಲು ಹೇಳಿದ್ದೇನೆ ಎಂದರು.

ಬಿಜೆಪಿಯವರು ಗುಜರಾತ್ ಮಾದರಿ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ವ್ಯಾಪಾರ ಹೆಚ್ಚಾಗಬೇಕಿದೆ, ಅದಕ್ಕೆ ಡ್ರಾಮಾ ಮಾಡುತ್ತಿದ್ದಾರೆ. ಶಾಸಕರು ಮತ್ತು ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಬಿಜೆಪಿಯವರಿಗೆ ಈ ನಿರ್ಧಾರ ಇಷ್ಟವಿಲ್ಲದಿದ್ದರೆ ಅವರು ಅದನ್ನು ಸರೆಂಡರ್ ಮಾಡಲಿ, ಎಂದು ಖಾರವಾಗಿ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಅಮಾನತುಗೊಂಡಿದ್ದ ಲೇಡಿ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಸಂಪತ್ತು: ವಜ್ರ, ಚಿನ್ನ, ಫ್ಲಾಟ್‌ಗಳು ಪತ್ತೆ, ಎಸಿಬಿ ಅಧಿಕಾರಿಗಳೇ ಶಾಕ್

Spread the loveಹೈದರಾಬಾದ್: ಅಮಾನತುಗೊಂಡಿದ್ದ ತಹಶೀಲ್ದಾರ್ ಮತ್ತು ಜಂಟಿ ಸಬ್​ ರಿಜಿಸ್ಟ್ರಾರ್ ತುಮ್ಮಕೊಮ್ಮ ಸುಚರಿತ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ