Breaking News

ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ ಸಾವು

Spread the love

ಚಾಮರಾಜನಗರ: ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ (ಗಂಡಾನೆ) ಸಾವನ್ನಪ್ಪಿರುವ ಘಟನೆ ಚಾಮರಾಜನಗರ  ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ನಡೆದಿದೆ.

ಗೋಪಿನಾಥಂ ಜಲಾಶಯದಲ್ಲಿ ನೀರು ಕುಡಿಯಲು‌ ಬಂದಿದ್ದ ವೇಳೆ ಗಂಡಾನೆ  ಗಾಯಗೊಂಡಿತ್ತು. ಈ ವಿಷಯವನ್ನು ಸ್ಥಳೀಯರು ಅರಣ್ಯ ಸಿಬ್ಬಂದಿ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಕೂಡ ಕಾಳಜಿ ವಹಿಸಿ ಚಿಕಿತ್ಸೆ ಕೊಡಿಸುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾಡಾನೆ ಸಾವನ್ನಪ್ಪಿದೆ.

 

ಘಟನೆಯಿಂದ ಸ್ಥಳೀಯರು, ವನ್ಯಜೀವಿ ಪ್ರಿಯರಿಗೆ ನೋವುಂಟಾಗಿದೆ.
ಇನ್ನೂ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ಪ್ರದೇಶದ ಕೃಷ್ಣಯ್ಯನ ಕಟ್ಟೆ ಡ್ಯಾಂ ಸಮೀಪ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಪ್ರವಾಸಿಗರ ಗಮನ ಸೆಳೆದಿದೆ. ಡ್ಯಾಂ ಬಳಿ ನೀರು ಕುಡಿಯಲು ಹಾಗೂ ಆಹಾರ ಅರಸಿ ಬಂದಿದ್ದ ಕಾಡಾನೆಗಳು ಗುಂಪು ಗುಂಪಾಗಿ ಸಂಚರಿಸುತ್ತಿರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ.

ಬಿಳಿಗಿರಿರಂಗನಬೆಟ್ಟ ಪ್ರದೇಶದಲ್ಲಿ ಇತ್ತೀಚೆಗೆ ವನ್ಯಜೀವಿಗಳ ಸಂಚಾರ ಹೆಚ್ಚಾಗಿದ್ದು, ಪ್ರವಾಸಿಗರು ಸುರಕ್ಷತಾ ನಿಯಮ ಪಾಲಿಸಿ ಅರಣ್ಯ ಪ್ರದೇಶಗಳಲ್ಲಿ ಸಂಚರಿಸಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ.


Spread the love

About Laxminews 24x7

Check Also

ಎಲ್‌ಆರ್‌ಐ ಯಾತ್ರೆ, ಖೇತ್ ಬಚಾವೋ ಅಭಿಯಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಚಾಲನೆ

Spread the loveಗೋಕಾಕ: ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗೆ ಜಲ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ