Breaking News

ನೂತನ ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

Spread the love

ಬೆಂಗಳೂರು: ನೂತನ ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ

ಹೆಚ್.ವೈ.ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಾಲಗಕೋಟೆ ಹಾಗೂ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಹುಲ್ಲಪ್ಪ ಮೇಟಿ  ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್  ಅವರು ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಮೇ 11 ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334ರಲ್ಲಿ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು.

ಪ್ರಮಾಣವಚನ ಕಾರ್ಯಕ್ರಮವನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ನಿಧನದ ಕಾರಣ ಮುಂದೂಡಲಾಗಿದೆ ಎಂದು ವಿಧಾನ ಸಭೆಯ ಕಚೇರಿ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ