Breaking News

ಸಂತಾನಹರಣ ಚಿಕಿತ್ಸೆ ವೇಳೆ ಕರುಳು ಕಟ್ – ವೈದ್ಯರ ಯಡವಟ್ಟಿನಿಂದ ಮಹಿಳೆ ಸಾವು: ಪತಿ ಆರೋಪ

Spread the love

ಚಿಕ್ಕಬಳ್ಳಾಪುರ: ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಕರುಳು ಕತ್ತರಿಸಿ ವೈದ್ಯರ ಯಡವಟ್ಟು ಮಾಡಿದ್ದಾರೆ ಎಂದು ಪತಿ ಆರೋಪಿಸಿದ್ದಾರೆ.

ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದ ನರ್ಮದಾ ಮೃತ ದುರ್ದೈವಿ. ಚಿಕ್ಕಬಳ್ಳಾಪುರ  ಜಿಲ್ಲೆಯ ಚಿಂತಾಮಣಿ ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಸಂತಾಹರಣ ಚಿಕಿತ್ಸೆ ಮಾಡಿಸಿಕೊಂಡು ಮನೆಗೆ ಮರಳಿದಾಗ ಸಾವನ್ನಪ್ಪಿದ್ದಾರೆ. 

ಏ.24ರಂದು ಚಿಂತಾಮಣಿಯ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯೆ ವಾಣಿ ರೆಡ್ಡಿ ನರ್ಮದಾ ಅವರಿಗೆ ಮಕ್ಕಳಾಗದಂತೆ ಟುಬೆಕ್ಟಮಿ ಶಸ್ತ್ರಚಿಕಿತ್ಸೆ ನಡೆಸಿದ್ದರು. ಅದಾದ ಬಳಿಕ ಕಳೆದ 14 ದಿನಗಳಿಂದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿ, 2 ದಿನಗಳ ಹಿಂದೆಯಷ್ಟೇ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಮನೆಗೆ ಹೋದ ಬಳಿಕ ನರ್ಮದಾಗೆ ತೀವ್ರವಾದ ಬೆನ್ನುನೋವು ಕಾಣಿಸಿಕೊಂಡಿತ್ತು. ಹೀಗಾಗಿ ಆಸ್ಪತ್ರೆಗೆ ಕರೆತರುತ್ತಿದ್ದರು. ದುರದೃಷ್ಟವಶಾತ್ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ.

ಶಸ್ತ್ರಚಿಕಿತ್ಸೆ ವೇಳೆ ವೈದ್ಯೆ ವಾಣಿರೆಡ್ಡಿ ಕರುಳು ಕಟ್ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ ನಾರಾಯಣಸ್ವಾಮಿ ಎಂಬ ವೈದ್ಯರು ಸಹ ಟ್ರೀಟ್‌ಮೆಂಟ್ ನೀಡಿ, 14 ದಿನಗಳ ಕಾಲ ಆಸ್ಪತ್ರೆಯಲ್ಲೇ ಉಳಿಸಿಕೊಂಡು ಚಿಕಿತ್ಸೆ ನೀಡಿದ್ದರು. ಆದರೆ ಮನೆಗೆ ಹೋದ ನಂತರ ಮಹಿಳೆಯ ಆರೋಗ್ಯದಲ್ಲಿ ಏರುಪೇರಾಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವೈದ್ಯರ ಯಡವಟ್ಟಿನಿಂದ ತನ್ನ ಹೆಂಡತಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಪತಿ ಆಸ್ಪತ್ರೆ ಎದುರು ಮೃತದೇಹ ಇಟ್ಟು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಮೃತ ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಮೇ 13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್: ಡಿಕೆಶಿ

Spread the loveಬೆಂಗಳೂರು: ಮೇ 13ಕ್ಕೆ ಬೆಂಗಳೂರು  ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ