Breaking News

ವ್ಯೂ ಪಾಯಿಂಟ್‌ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳ ಸಾವು

Spread the love

ತಿರುವನಂತಪುರಂ: ವ್ಯೂ ಪಾಯಿಂಟ್ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಮಂಕಡದಲ್ಲಿ ನಡೆದಿದೆ. ಇಂದು ಸಂಜೆ 5:30 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಮಲ್ಲಪುರಂ ನ ಮಂಕಡ ವೆಳ್ಳಿಲ ಕಡುಕಾ ಸಿಟಿ ನಂಬೂರಿಕಾಡ್ ವ್ಯೂ ಪಾಯಿಂಟ್‌ಗೆ ಆಗಮಿಸಿದ್ದ ವೇಳೆ ಸಿಡಿಲು ಬಡಿದು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ರಹೀಸ್ (20), ಬಹಾಸ್ (18), ಸಿಯಾದ್ (18), ಫಹದ್(22) ಮೃತರು. ರೋಶನ್ (20), 2- ಇಶಾತ್ (19), ಸಲ್ಮಾನುಲ್ ಫಾರಿಸ್ (21) ಗಾಯಗೊಂಡಿದ್ದು, ಎಲ್ಲರೂ ಮಲ್ಲಪುರಂ ಮೂಲದವರಾಗಿದ್ದಾರೆ.

ಒಟ್ಟು 7 ಜನರ ಗುಂಪು ವ್ಯೂ ಪಾಯಿಂಟ್‌ಗೆ ತಲುಪಿತ್ತು, ಈ ಪೈಕಿ ಮೂವರು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಸದ್ಯ ಗಾಯಗೊಂಡವರನ್ನ ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ.

ಇನ್ನೂ ಕಾಡಿನ ಮಧ್ಯೆ ದುರ್ಗಮ ಪ್ರದೇಶವಾದ ಕಾರಣ ರಕ್ಷಣಾ ಕಾರ್ಯಾಚರಣೆಯಲ್ಲಿ ವಿಳಂಬವಾಗಿದೆ. ಅನಿರೀಕ್ಷಿತವಾಗಿ ಸುರಿದ ಭಾರೀ ಮಳೆ ನಡುವೆ ಗುಡುಗು ಸಿಡಿಲಿನ ಆರ್ಭಟವೂ ಜೋರಾಗಿದೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ