Breaking News

ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ರೇಪ್‌

Spread the love

ಬೀದರ್: ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನೇ ಆತ್ಯಾಚಾರ ಎಸಗಿರುವ ಹೀನಕೃತ್ಯ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

8 ವರ್ಷದ ಬಾಲಕಿ ಮೇಲೆ 35 ವರ್ಷದ ಆರೋಪಿ ಧನರಾಜ್ ಕಾಂಬಳೆ ಅತ್ಯಾಚಾರ ಎಸಗಿದ್ದಾನೆ.

ತಾಯಿಯನ್ನು ಕಳೆದುಕೊಂಡಿದ್ದ ಮಗಳನ್ನು ತಂದೆ ಒಬ್ಬಳ್ಳನೇ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ವ್ಯಕ್ತಿ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಗೆ ಕರೆದು ಅತ್ಯಾಚಾರ ಮಾಡಿ ಕ್ರೌರ್ಯ ಮೆರೆದಿದ್ದಾನೆ. ಸದ್ಯ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಸಂತ್ರಸ್ತ ಬಾಲಕಿಯ ತಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ