Breaking News

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

Spread the love

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ ಬೆನ್ನಲ್ಲೇ ಈಗ ಪರಿಷತ್ ಸದಸ್ಯರು ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ದೆಹಲಿಯಲ್ಲಿ ಪ್ರಯತ್ನ ಆರಂಭಿಸಿದ್ದಾರೆ.

ಪರಿಷತ್ ಸದಸ್ಯರಾದ ಪುಟ್ಟಣ್ಣ, ಮಧು ಜಿ ಮಾದೇಗೌಡ, ಬಸಣ್ಣಗೌಡ ಬಾದರ್ಲಿ, ಚಂದ್ರಶೇಖರ್ ಪಾಟೀಲ್, ಡಿ.ಟಿ ಶ್ರೀನಿವಾಸ್ ದೆಹಲಿಯಲ್ಲಿ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಶೀಘ್ರವಾಗಿ ಸಚಿವ ಸಂಪುಟ ಪುನರ್ ರಚನೆ ಮಾಡಬೇಕು, ಹಿರಿಯ ಶಾಸಕರಿಗೆ ಆದ್ಯತೆ ನೀಡುವಂತೆ ಪರಿಷತ್ ಸದಸ್ಯರಿಗೂ ಆದ್ಯತೆ ನೀಡಬೇಕು. ಕನಿಷ್ಠ ಐದು ಮಂದಿ ಪರಿಷತ್ ಸದಸ್ಯರಿಗೆ ಕ್ಯಾಬಿನೆಟ್ ನಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆದು ಮುಖ್ಯಮಂತ್ರಿ ಗೊಂದಲ ಶೀಘ್ರ ಬಗೆಹರಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಲು ಪರಿಷತ್ ಸದಸ್ಯರು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್‌

Spread the loveಬೆಂಗಳೂರು: ಪತಿಗಿಂತ  ಹೆಚ್ಚು ದುಡಿಯುವ ಪತ್ನಿಗೆ  ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ