ನವದೆಹಲಿ : ಕರ್ನಾಟಕದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮಹಾನಗರಗಳ ಪೈಕಿ ಬೆಂಗಳೂರು, ಮಹಾರಾಷ್ಟ್ರದ ಪುಣೆ ಮತ್ತು ತೆಲಂಗಾಣದ ಹೈದರಾಬಾದ್ ನಗರಗಳು ಇದೀಗ ಕೊರೊನಾ ಹಾಟ್ ಸ್ಪಾಟ್ ನಗರಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಒಂದು ತಿಂಗಳಲ್ಲಿ ಕೊರೊನಾದ ಹೊಸ ಪ್ರಕರಣಗಳು ನಿತ್ಯವೂ ಸರಾಸರಿ ಶೇ.
12.90 ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ ಶೇ. 8.90 ರಷ್ಟು ಹೆಚ್ಚಳವಾಗಿದೆ. ಹೀಗಾಗಿ ಬೆಂಗಳೂರು ದೇಶದಲ್ಲಿ ಸದ್ಯ ಹೊಸ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ ಎಂದು ತಜ್ಞರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 2125 ಮಂದಿಗೆ ಸೋಂಕು ಧೃಡವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 29621 ಕ್ಕೆ ಏರಿಕೆಯಾಗಿದೆ. ಇದುವರೆಗೆ ಆಸ್ಪತ್ರೆಯಿಂದ 6540 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ 49 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ರೆ, ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸಾವಿನ ಸಂಖ್ಯೆ 631 ಕ್ಕೆ ಏರಿಕೆಯಾಗಿದೆ.