Breaking News

ದೂರವಾಣಿ ಕದ್ದಾಲಿಕೆ ಆರೋಪ: ರಾಜಸ್ಥಾನ ಸರ್ಕಾರದ ವಿವರಣೆ ಕೇಳಿದ ಕೇಂದ್ರ ಗೃಹ ಸಚಿವಾಲಯ

Spread the love

ಹೊಸದಿಲ್ಲಿ: ರಾಜಸ್ಥಾನದ ರಾಜಕೀಯದ ಅನಿಶ್ಚಿತತೆ ಮುಂದುವರಿದಿದೆ. ಬಿಜೆಪಿ ನಾಯಕರ ದೂರವಾಣಿ ಸಂಭಾಷಣೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡಿದೆ ಎಂಬ ಆರೋಪ ತೀವ್ರವಾಗುತ್ತಿದ್ದು, ಈ ಬಗ್ಗೆ ರಾಜಸ್ಥಾನ ಸರ್ಕಾರದ ಬಳಿ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ.

ರಾಜಸ್ಥಾನದ ಗೆಹ್ಲೋಟ್ ಸರಕಾರವನ್ನು ಉರುಳಿಸಲು ಬಿಜೆಪಿ ಆಮಿಷವೊಡ್ಡಿದೆ ಎಂಬ ಮಾತುಗಳಿಗೆ ಆಧಾರ ಒದಗಿಸುವಂತಹ ಸಂಭಾಷಣೆಗಳುಳ್ಳ ಆಡಿಯೋ ಕ್ಲಿಪ್ ನ್ನು ಕಾಂಗ್ರೆಸ್ ಬಹಿರಂಗಪಡಿಸಿದ್ದು, ಎರಡು ಎಫ್ ಐಆರ್ ಕೂಡಾ ದಾಖಲಾಗಿದೆ. ಈ ಕುರಿತು ಕೂಡಾ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ.

ರಾಜಸ್ಥಾನದ ಕಾಂಗ್ರೆಸ್ ಸರಕಾರ ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಆಡಿಯೋ ಗಳು ನೈಜವಾಗಿರುವುದು ಎಂದು ಪ್ರತಿಪಾದಿಸುತ್ತಿದ್ದಾರೆ. ಈ ಬಗ್ಗೆ ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ಆಡಿಯೋ ಕ್ಲಿಪ್ ಗಳ ನೈಜತೆ, ಸತ್ಯಾಸತ್ಯತೆಗಳ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ದೂರವಾಣಿ ಕದ್ದಾಲಿಕೆ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ರಾಜಸ್ಥಾನ ಸರ್ಕಾರವನ್ನು ವಜಾ ಮಾಡಿ, ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಮಾಯಾವತಿ ಆಗ್ರಹಿಸುತ್ತಿದ್ದಾರೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ