Breaking News

ಟ್ರ‍್ಯಾಕ್ಟರ್-ಲಾರಿ ನಡುವೆ ಭೀಕರ ಅಪಘಾತ – ಮಗು ಸೇರಿ ಏಳು ಮಂದಿಯ ದುರಂತ ಅಂತ್ಯ

Spread the love

ಕೊಪ್ಪಳ: ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ಕೊಪ್ಪಳ  ಜಿಲ್ಲೆಯ ಮುನಿರಾಬಾದ್  ಬಳಿ ನಡೆದಿದೆ.ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾದ ಕೆಂಚಪ್ಪ (35), ಮಹಾಂತೇಶ್ (18) ಭರತ್ (01) ಸವಿತಾ (12) ಮಾರೇಶ್, ಗೌರಮ್ಮ, ಮಂಜಮ್ಮ ಮೃತರು.

50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಹಿಂದಿನಿಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ‍್ಯಾಕ್ಟರ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಮಗು ಸೇರಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ.

ಸದ್ಯ ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಅಥವಾ ಬೆಂಗಳೂರು ಆಸ್ಪತ್ರೆಗೆ ದಾಖಲಿಸುವ ಸಂಭವವಿದೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಎಸ್ಪಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆಪಿ ಮುರಳೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಪ್ಪಳ ಆಸ್ಪತ್ರೆಗೆ ಎಸ್ಪಿ ಎಲ್ ಅರಸಿದ್ದಿ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ