Breaking News

ಮಧ್ಯರಾತ್ರಿಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ

Spread the love

ಬೆಂಗಳೂರು: ಪೆಟ್ರೋಲ್, ಡಿಸೇಲ್ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ.

ಈ ಕುರಿತು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಮಾಹಿತಿ ನೀಡಿದೆ. 20ರಿಂದ 30% ದರ ಏರಿಕೆ ಮಾಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಪ್ರತಿದಿನ ಖಾಸಗಿ ಬಸ್ ಮಾಲೀಕರು ಕನಿಷ್ಠ 150 ಲೀಟರ್ ಆಯಿಲ್ ಹಾಕಿಸಿಕೊಳ್ಳಬೇಕು. ನಮಗೆ ಪ್ರತಿ ಟ್ರಿಪ್‌ಗೆ ಹೆಚ್ಚುವರಿಯಾಗಿ 450 ರೂ. ಅಂದರೆ ಹೊರೆ ಆಗಲಿದೆ. ಹೀಗಾಗಿ ಅನಿವಾರ್ಯವಾಗಿ ದರ ಏರಿಕೆ ಮಾಡುತ್ತಿದ್ದೇವೆ. ಇದರ ಪರಿಣಾಮ ಪ್ರಯಾಣಿಕರ ಮೇಲೆ ಬೀಳಲಿದೆ ಎಂದಿದೆ.

ಕರ್ನಾಟಕ ರಾಜ್ಯ ಖಾಸಗಿ ಶಾಲಾ ವಾಹನಗಳ ಯುನಿಯನ್ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಸ್ಕೂಲ್ ವಾಹನಗಳ ದರ 10% ವರೆಗೆ ಏರಿಕೆ ಮಾಡಿದ್ದಾಗಿ ತಿಳಿಸಿದ್ದಾರೆ. ಇದರ ಜೊತೆಗೆ ರಾಜ್ಯ ಟ್ರ್ಯಾವೆಲ್‌ ಪಾಸೆಂಜರ್ ವಾಹನಗಳ ದರವೂ 10%-15%ನಷ್ಟು ಏರಿಕೆಯಾಗಲಿದೆ.

ಒಲಾ, ಉಬರ್ ದರ ಏರಿಕೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ಸೋಮವಾರ (ಮೇ 18) ಚಾಲಕರ ಸಂಘದಿಂದ ಸಭೆ ನಡೆಯಲಿದೆ. ಸಭೆಯ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆದಿದ್ದು, ದರ ಏರಿಕೆಗೆ ಪ್ರಸ್ತಾವನೆಗೆ ಒತ್ತಡ ಹೇರಲು ತಯಾರಿ ನಡೆಸಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ