Breaking News

ಧಾರಾಕಾರ ಮಳೆಗೆ ನಾಲ್ವರು ದುರ್ಮರಣ – ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಎಂ.ಬಿ ಪಾಟೀಲ್

Spread the love

ವಿಜಯಪುರ: ಜಿಲ್ಲೆಯ ಹಲವೆಡೆ ಗುರುವಾರ (ಮೇ 14) ತಡರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಸಿಂದಗಿ (Sindagi) ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸಚಿವ ಎಂ.ಬಿ ಪಾಟೀಲ್‌ ಲಕ್ಷ ಪರಿಹಾರ ಘೋಷಿಸಿದ್ದಾರೆ.

ಸಿಂದಗಿ  ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಗುರುತಿಸಲಾಗಿದೆ.

ತಮ್ಮ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬಸ್ಥರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಘಟನೆ ನಡೆದ ದಿನ ಎಂದಿನಂತೆ ರಾತ್ರಿ ಮನೆಯಲ್ಲಿ ಮಲಗಿದ್ದರು. ಈ ವೇಳೆ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ಸಮಯದಲ್ಲಿ ಮನೆಯಿಂದ ಆಚೆ ಮಲಗಿದ್ದ ಗುರುನಾಥ ತಾಯಿ ಹಾಗೂ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರ ಮೃತದೇಹಗಳನ್ನ ಹೊರತಗೆದಿದ್ದಾರೆ. ಸ್ಥಳದಲ್ಲಿ ಗುರುನಾಥ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನು ಸ್ಥಳಕ್ಕೆ ಸಚಿವ ಎಂ.ಬಿ ಪಾಟೀಲ್ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಜೊತೆಗೆ ಸರ್ಕಾರದಿಂದ ಮೃತರಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಲ್ಲದೇ ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಘಟನೆ ಸಂಬಂಧ ಸಿಂದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಇಬ್ಬರನ್ನು ಬಲಿ ಪಡೆದಿದ್ದ ‘ಶೌರ್ಯ’ ಸೆರೆಹಿಡಿದ ಏಳೇ ತಿಂಗಳಲ್ಲಿ ಸಾವು

Spread the loveಶಿವಮೊಗ್ಗ: ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರನ್ನು ಬಲಿ ಪಡೆದಿದ್ದ ಕಾಡಾನೆ  ಶೌರ್ಯ (32) ಶಿವಮೊಗ್ಗದ  ಸಕ್ರೆಬೈಲು  ಆನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ