Breaking News

ಬಿಡದಿ ಟೌನ್ ಶಿಪ್ ಪ್ರಾಜೆಕ್ಟ್ ಕೈಬಿಡಬೇಕು: ಕುಮಾರಸ್ವಾಮಿ ಬಳಿಕ ಹೆಚ್‌ಡಿಡಿ ಒತ್ತಾಯ

Spread the love

ಬೆಂಗಳೂರು: ಬಿಡದಿ ಟೌನ್ ಶಿಪ್ ಪ್ರಾಜೆಕ್ಟ್ ಕೈಬಿಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಬಳಿಕ ಮಾಜಿ ಪ್ರಧಾನಿ ದೇವೇಗೌಡ ಸಿಎಂ ಸಿದ್ದರಾಮಯ್ಯರನ್ನ ಒತ್ತಾಯ ಮಾಡಿದ್ದಾರೆ.

ಜೆಪಿ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಹೆಸರು ಹೇಳದೇ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿ ಪ್ರಾಜೆಕ್ಟ್ ನಿಲ್ಲಿಸಬೇಕು ಎಂದು ಒತ್ತಾಯ ಮಾಡಿದ್ದರು. ಇದಕ್ಕೆ ಕೌಂಟರ್ ಕೊಟ್ಟಿದ್ದ ಡಿಸಿಎಂ ಡಿಕೆ ಶಿವಕುಮಾರ್ ಕುಮಾರಸ್ವಾಮಿಯೇ ಘೋಷಣೆ ಮಾಡಿದ್ದ ಯೋಜನೆ ಮಾಡುತ್ತಿದ್ದೇನೆ ಎಂದು ತಿರುಗೇಟು ನೀಡಿದ್ದರು.

ಇಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾಜಿ ಪ್ರಧಾನಿ ದೇವೇಗೌಡ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಏನು ಮಾಡಿದ್ರೋ ಅದನ್ನ ನಾನು ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ಕುಮಾರಸ್ವಾಮಿ ಬೆಂಗಳೂರು ಅತ್ಯಂತ ಹೆಚ್ಚು ವಾಹನ, ಜನಸಂಖ್ಯೆ ದಟ್ಟಣೆ ಸಡಿಲ ಮಾಡಲು 5 ಟೌನ್ ಶಿಪ್ ಮಾಡಲು ತೀರ್ಮಾನ ಮಾಡಿದ್ದರು. ಅದಕ್ಕೆ ಡಿಎಲ್‌ಎಫ್ ಕಂಪನಿ ಅವರು 400 ಕೋಟಿ ಡೆಪಾಸಿಟ್ ಮಾಡಿದ್ರು. ಜನರು, ರೈತರು ವಿರೋಧ ಮಾಡಿದ್ದಕ್ಕೆ ಕುಮಾರಸ್ವಾಮಿ ಭೂಮಿ ವಶಪಡಿಸಿಕೊಳ್ಳೋಕೆ ನೋಟಿಫಿಕೇಶನ್ ಮಾಡಲಿಲ್ಲ, ಯೋಜನೆ ಮಾಡಲಿಲ್ಲ ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ