Breaking News

ಅಕ್ರಮವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾಪ್ರಜೆಗಳು ಹುಬ್ಬಳ್ಳಿಯಲ್ಲಿ ಲಾಕ್

Spread the love

ಹುಬ್ಬಳ್ಳಿ: ಕಾನೂನು ಬಾಹಿರವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು ಹುಬ್ಬಳ್ಳಿ  ರೈಲ್ವೆ ರಕ್ಷಣಾ ಪಡೆ  ಬಂಧಿಸಿದೆ.

ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಾಲ್ವರು ವಿದೇಶಿ ಪ್ರಜೆಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರ ಬಳಿ ಯಾವುದೇ ಗುರುತಿನ ದಾಖಲೆಗಳಿರಲಿಲ್ಲ.

ದಾಖಲೆಗಳಿಲ್ಲದಿದ್ದರೂ ನಾಲ್ವರು ವಿದೇಸಿಗರು ರೈಲಿನಲ್ಲಿ ಪ್ರಯಾಣ ಮಾಡಿ ಹುಬ್ಬಳ್ಳಿವರೆಗೆ ಬಂದಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದಿರುವ ಆರ್‌ಪಿಎಫ್ ಸಿಬ್ಬಂದಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಆರ್‌ಪಿಎಫ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ಮುಂದುವರಿದಿದೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ