Breaking News

ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್

Spread the love

ನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಜಸ್ಥಾನದ ಸೀಕರ್ ಮೂಲದ ಪ್ರದೀಪ್ ಮೇಘವಾಲ್, ಉತ್ತರ ಪ್ರದೇಶ ರಿತಿಕ್ ಮಿಶ್ರಾ, ದೆಹಲಿಯ ಆಜಾದ್‌ಪುರದ ಅನಿಷ್ಕಾ ಪಾಂಡೆ ಹಾಗೂ ದಕ್ಷಿಣ ಗೋವಾದ 17 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. 

650 ಅಂಕಗಳ ನಿರೀಕ್ಷೆಯಲ್ಲಿದ್ದ ರಾಜಸ್ಥಾನದ ಪ್ರದೀಪ್:
ಮೃತ ಪ್ರದೀಪ್ ಕಳೆದ ಮೂರು ವರ್ಷಗಳಿಂದ ತನ್ನ ಇಬ್ಬರು ಸಹೋದರಿಯರೊಂದಿಗೆ ಸೀಕರ್‌ನಲ್ಲಿ ವಾಸಿಸುತ್ತಿದ್ದು, ಖಾಸಗಿ ಕೋಚಿಂಗ್ ಸಂಸ್ಥೆಯೊಂದರಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ಈ ಬಾರಿ ಪರೀಕ್ಷೆಯನ್ನು ಉತ್ತಮವಾಗಿ ಬರೆದಿದ್ದು, ಸರ್ಕಾರಿ ವೈದ್ಯಕೀಯ ಸೀಟು ಸಿಗುವುದು ಖಚಿತ ಎಂಬ ಭರವಸೆಯಲ್ಲಿ ಇದ್ದಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಪರೀಕ್ಷೆ ರದ್ದಾಗಿದ್ದು, ಆಘಾತದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಶುಕ್ರವಾರ (ಮೇ 15) ಮಧ್ಯಾಹ್ನ ಪ್ರದೀಪ್ ತನ್ನ ಸಹೋದರಿಯ ಸ್ಕಾರ್ಫ್ ಬಳಸಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ಘಟನೆ ನಡೆದ ಸಮಯದಲ್ಲಿ ಆತನ ಕಿರಿಯ ತಂಗಿ ಕೋಚಿಂಗ್ ಕ್ಲಾಸ್‌ಗೆ ಹೋಗಿದ್ದರು. ಹಿರಿಯ ತಂಗಿ ಸ್ನಾನ ಮುಗಿಸಿ ಹೊರಬಂದಾಗ ಪ್ರದೀಪ್ ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೂರನೇ ಬಾರಿಗೆ ಪರೀಕ್ಷೆ ಬರೆದಿದ್ದ ಯುಪಿಯ ರಿತಿಕ್ ಮಿಶ್ರಾ:
ಉತ್ತರ ಪ್ರದೇಶದ ಲಖಿಂಪುರ್ ಖೇರಿಯ 21 ವರ್ಷದ ರಿತಿಕ್ ಮಿಶ್ರಾ ಎಂಬ ವಿದ್ಯಾರ್ಥಿ ಗುರುವಾರ (ಮೇ 14) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂರನೇ ಬಾರಿಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಈ ಬಾರಿ ಉತ್ತಮ ಅಂಕಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದ. ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಪರೀಕ್ಷೆ ರದ್ದಾದ ಪರಿಣಾಮ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ದೆಹಲಿಯ ಆಜಾದ್‌ಪುರದ ಯುವತಿ:
ಆಜಾದ್‌ಪುರದಲ್ಲಿ 20 ವರ್ಷದ ಯುವತಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡದೇ ಶವಸಂಸ್ಕಾರ ನೆರವೇರಿಸಿದ್ದಾರೆ. ಈ ಸಂಬಂಧ ಸದ್ಯ ತನಿಖೆ ನಡೆಯುತ್ತಿದೆ.

ಒತ್ತಡದಿಂದಾಗಿ ಗೋವಾದ ಬಾಲಕ ಆತ್ಮಹತ್ಯೆ:
ದಕ್ಷಿಣ ಗೋವಾದ ಮಾರ್ಗೋವ್‌ನಲ್ಲಿ 17 ವರ್ಷದ ಬಾಲಕ ಬುಧವಾರ (ಮೇ 13) ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್‌ನೋಟ್‌ನಲ್ಲಿ ಶೈಕ್ಷಣಿಕ ಒತ್ತಡವೇ ಕಾರಣ ಎಂದು ಬರೆದಿಟ್ಟಿದ್ದಾನೆ.

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮೇ 13ರಂದು ನೀಟ್ 2026ರ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾಹಿತಿ ನೀಡಿ, ಜೂ.21ರಂದು ಮರುಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ, ಮುಂದಿನ ವರ್ಷದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಮಾದರಿಯಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ರೆ ಭೂಪಟದಲ್ಲಿ ಇಲ್ಲದಂತೆ ಮಾಡ್ತೀವಿ: ಪಾಕ್‌ಗೆ ಖಡಕ್‌ ವಾರ್ನಿಂಗ್‌

Spread the loveನವದೆಹಲಿ: ಭಯೋತ್ಪಾದಕರಿಗೆ ಆಶ್ರಯ ನೀಡುವುದು, ಭಾರತದ  ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದರೆ, ಭೂಪಟದಲ್ಲಿ ಪಾಕಿಸ್ತಾನ ಇರಬೇಕೆ ಅಥವಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ