Breaking News

ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣ: ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ಠಾಣೆಯಲ್ಲಿ ಮೊದಲ ದೂರು ದಾಖಲು!

Spread the love

ಳಗಾವಿಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಮೊದಲ ಅಧಿಕೃತ ಖಾಸಗಿ ದೂರು ದಾಖಲಾಗಿದೆ. ಹೂಡಿಕೆದಾರ ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬುವವರು ಕಾಗವಾಡ ಪೊಲೀಸ್ ಠಾಣೆಯಲ್ಲಿ ವಂಚನೆ ಕುರಿತು ದೂರು ನೀಡಿದ್ದಾರೆ.
ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ತಾಲೂಕಿನ ಹೂಡಿಕೆದಾರ ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬುವವರು ಮೊದಲ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಠೇವಣಿ ಹಣದ ಮೇಲೆ ವಾರ್ಷಿಕ ಶೇಕಡಾ 36 ರಷ್ಟು ಭಾರಿ ಬಡ್ಡಿ ನೀಡುವುದಾಗಿ ನಂಬಿಸಿದ್ದ ಶಿವಾನಂದ ನೀಲಣ್ಣವರ ಮಾತುಗಳನ್ನು ನಂಬಿ ಕೃಷ್ಣಾ ಅಪ್ರಾಜ್ ಅವರು ಕಳೆದ ಏಪ್ರಿಲ್ ತಿಂಗಳಲ್ಲಿ ಹಂತ ಹಂತವಾಗಿ ಒಟ್ಟು 5 ಲಕ್ಷ ರೂಪಾಯಿಗಳನ್ನು ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದರು; ಆದರೆ ಹೂಡಿಕೆ ಮಾಡಿದ ಹಣಕ್ಕೆ ಬಡ್ಡಿಯೂ ನೀಡದೆ, ಅಸಲನ್ನೂ ಮರಳಿಸದೆ ನಂಬಿಸಿ ಮೋಸ ಮಾಡಿರುವುದಾಗಿ ದೂರಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಸದ್ಯ ಈ ಇಡೀ ಬಹುಕೋಟಿ ವಂಚನೆ ಹಗರಣದ ತನಿಖೆ ಸಿಐಡಿಗೆ ಹಸ್ತಾಂತರಗೊಳ್ಳುತ್ತಿದ್ದಂತೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

Spread the loveಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ