Breaking News

ಅಬಕಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ಪಿರೀಟ್ ಸಾಗಿಸುತ್ತಿದ್ದ ಟ್ಯಾಂಕರ್ ವಶಕ್ಕೆ

Spread the love

ಬೆಳಗಾವಿ:  ಟ್ಯಾಂಕರ್ ನಲ್ಲಿ ಅಕ್ರಮವಾಗಿ ಸ್ವೀರಿಟ್ ಸಾಗಿಸುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಟ್ಯಾಂಕರ್ ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಜಾಂಬೋಟಿಯಿಂದ ಕಣಕುಂಬಿಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ವಶಕ್ಕೆ ಪಡೆಯಲಾಗಿದೆ. ಟ್ಯಾಂಕರ್ ನಲ್ಲಿ 14,000.ಲೀ ಸ್ವೀರಿಟ್ ಅಕ್ರಮವಾಗಿ ಮಾರಾಟಕ್ಕಾಗಿ ಸಾಗಾಣಿಕೆ ಮಾಡಲಾಗುತಿತ್ತು.

ಟ್ಯಾಂಕರ್ ಚಾಲಕ ಸಿದ್ದರಾಜು ಪುಟ್ಟಸ್ವಾಮಿ ಶೆಟ್ಟಿ (47) ವಿರುದ್ಧ ಬಿಎನ್ಎಸ್‌ಎಸ್ ಕಾಯ್ದೆ 2023ರ ಕಲಂ 35(3)ರನ್ವಯ ಮುಂದಿನ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿ, ವಾಹನದ ಮಾಲೀಕನನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ನಡೆಸಲಾಗುತ್ತಿದೆ.

14,00,000 ರೂ, ಮೌಲ್ಯದ ಸ್ವೀರಿಟ್, 1500 ರೂ. ಮೌಲ್ಯದ ಮೋಬೈಲ್, 21,00,000 ರೂ ಮೌಲ್ಯದ ಟ್ಯಂಕರ್, ಹೀಗೆ ಒಟ್ಟು 35,01, 500 ರೂ ಮೌಲ್ಯದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಖಾನಾಪೂರ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಚಿವ ಸ್ಥಾನದಿಂದ ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ – ಶಿವಮೊಗ್ಗದಲ್ಲಿ ಡಿಸಿ ಕಚೇರಿ ಮುತ್ತಿಗೆ ಯತ್ನ

Spread the loveಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ