Breaking News

1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ ಮರುಪರಿಶೀಲಿಸಿ – ಶಿಕ್ಷಣ ಇಲಾಖೆಗೆ ಹೈಕೋರ್ಟ್‌ ಆದೇಶ

Spread the love

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಮರು ಪರಿಶೀಲಿಸುವಂತೆ ಹೈಕೋರ್ಟ್  ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಕಳೆದ ಮಾ.28ರಂದು ಶಿಕ್ಷಣ ಇಲಾಖೆಯು ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ನಿಗದಿಪಡಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶ ಪ್ರಶ್ನಿಸಿ ಬೆಂಗಳೂರಿನ ಮಾಸ್ಟರ್ ಕೃಷ್ಣ, ಗಣೇಶ್ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ರಜಾಕಾಲೀನ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಅಜಯ್ ಕುಮಾರ್ ಪಾಟೀಲ್ ವಾದ ಮಂಡಿಸಿ, ಸರ್ಕಾರದ ಈ ವಯೋಮಿತಿ ಆದೇಶದಿಂದ ಸುಮಾರು 5 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. 2025-26ನೇ ಸಾಲಿನಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪೂರೈಸಿದ ಅನೇಕ ಮಕ್ಕಳು, ಹೊಸ ವಯೋಮಿತಿ ನಿಯಮದಿಂದಾಗಿ ಮತ್ತೆ ಯುಕೆಜಿ ಅಧ್ಯಯನ ಮಾಡುವ ಪರಿಸ್ಥಿತಿ ಎದುರಾಗಿದೆ. 5 ವರ್ಷ 5 ತಿಂಗಳು ಪೂರೈಸಿರುವ ಮಕ್ಕಳಿಗೂ ಒಂದನೇ ತರಗತಿ ದಾಖಲಾತಿಗೆ ಅವಕಾಶ ಕಲ್ಪಿಸಬೇಕು ಎಂದರು.

ಸೂಕ್ತ ಸಮಯಾವಕಾಶ ನೀಡಿದ್ದಲ್ಲಿ ವಯೋಮಿತಿ ವಿಚಾರವನ್ನು ಪರಿಶೀಲಿಸಿ ಹೊಸ ಆದೇಶ ಹೊರಡಿಸುವುದಾಗಿ ಹೆಚ್ಚುವರಿ ಅಡ್ವಕೇಟ್ ಜನರಲ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಸರ್ಕಾರದ ಮನವಿಯನ್ನು ಆಲಿಸಿದ ಹೈಕೋರ್ಟ್, ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮರುಪರಿಶೀಲನೆ ನಡೆಸಿ ಒಂದು ವಾರದೊಳಗೆ ಸೂಕ್ತ ಆದೇಶ ಹೊರಡಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿ, ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

Spread the loveಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ  ಕೆಲವು ಲೋಪ ಕಂಡುಬಂದ ಹಿನ್ನೆಲೆ ಬಿಜೆಪಿ, ಜೆಡಿಎಸ್  ಮೈತ್ರಿ ನಾಯಕರು ಮುಖ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ