Breaking News

ಕ್ಷುಲ್ಲಕ ಕಾರಣಕ್ಕೆ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ..

Spread the love

ಗದಗ ಜಿಲ್ಲೆಯ Nargund ತಾಲೂಕಿನ ರಡ್ಡೆರನಾಗನೂರು ಗ್ರಾಮದಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ವಿಶ್ವನಾಥ ಹಾದಿಮನಿ (28) ಎಂಬಾತನನ್ನು ಪತ್ನಿ ಕವಿತಾ ಹಾದಿಮನಿ ಕಬ್ಬಿಣದ ರಾಡ್ (ಹಾರಿ) ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ. 2022ರಲ್ಲಿ ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಡುವೆ ಮದುವೆಯ ನಂತರ ಕಲಹ ಶುರುವಾಗಿತ್ತು. ಕಳೆದ ಎರಡು ವರ್ಷಗಳಿಂದ ಕವಿತಾ ತವರು ಮನೆಯಲ್ಲಿ ವಾಸವಾಗಿದ್ದಳು. ಇತ್ತೀಚೆಗೆ ಕುಟುಂಬ ಕಾರ್ಯಕ್ರಮದ ನಿಮಿತ್ತ ಗಂಡನ ಮನೆಗೆ ಬಂದಿದ್ದ ವೇಳೆ ಮತ್ತೆ ಜಗಳ ಉಂಟಾಗಿ ಘಟನೆ ನಡೆದಿದೆ. ಆರೋಪಿ ಕವಿತಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶ್ವಾನದಳ ಹಾಗೂ ಸೋಕೋ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ