Breaking News

ಶೂಟೌಟ್ ಮಾಡಿಕೊಂಡು ಬೆಳಗಾವಿಯ ಖ್ಯಾತ ವೈದ್ಯ ಆತ್ಮಹತ್ಯೆಗೆ ಶರಣು

Spread the love

ಬೆಳಗಾವಿ : ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ನಗರದಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ನಡೆದಿದೆ.

ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಡಾ. ಭಟ್ಕಳ ಅವರು ತಮ್ಮ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಿನ್ನೆಲೆ ಈ ಕೃತ್ಯ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ನಂತರವೇ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಟಿಳಕವಾಡಿ ಠಾಣೆಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಮಾಜದಲ್ಲಿ ಸರಳ ಹಾಗೂ ಸ್ನೇಹಪರ ವ್ಯಕ್ತಿತ್ವದಿಂದ ಪರಿಚಿತರಾಗಿದ್ದ ಅವರು, ವೈದ್ಯ ವಲಯದಲ್ಲಿಯೂ ಗೌರವ ಪಡೆದಿದ್ದರು.

 


Spread the love

About Laxminews 24x7

Check Also

ರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

Spread the loveಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ  ಕೆಲವು ಲೋಪ ಕಂಡುಬಂದ ಹಿನ್ನೆಲೆ ಬಿಜೆಪಿ, ಜೆಡಿಎಸ್  ಮೈತ್ರಿ ನಾಯಕರು ಮುಖ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ