Breaking News

ಗಂಡನ ಕಿರುಕುಳಕ್ಕೆ ಬೇಸತ್ತು ನಾಲ್ಕು ತಿಂಗಳ ಗರ್ಭಿಣಿ ಆತ್ಮಹತ್ಯೆ

Spread the love

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಶೃತಿ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎರಡು ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ ಮಾರಲು ಮುಂದಾಗಿದ್ದ. ಇದಕ್ಕೆ ಶೃತಿ ಸಹಿ ಹಾಕದಿದ್ದಾಗ ಆಕೆಗೆ ಮನಬಂದಂತೆ ಥಳಿಸಿ, ತಾಳಿ ಕಿತ್ತುಕೊಂಡು ದೌರ್ಜನ್ಯ ಎಸಗಿದ್ದ.

ಗಂಡನ ಕಾಟ ತಾಳಲಾರದೆ 15 ದಿನಗಳ ಹಿಂದೆ ಶೃತಿ ತವರು ಮನೆ ಸೇರಿದ್ದರು. ಆದರೆ, ನಿನ್ನೆ ಅಲ್ಲಿಗೂ ಬಂದ ಗೋಪಾಲ್ ಮತ್ತೆ ಗಲಾಟೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದ ತೀವ್ರ ಮನನೊಂದ ಶೃತಿ ತವರು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಹೊಟ್ಟೆಯಲ್ಲಿದ್ದ ಕಂದಮ್ಮನೊಂದಿಗೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವುದು ಗ್ರಾಮದಲ್ಲಿ ಶೋಕದ ವಾತಾವರಣ ಮೂಡಿಸಿದೆ. ಸದ್ಯ ಕಲಬುರಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

Spread the loveಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ