Breaking News

51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ!

Spread the love

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ  ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 51 ಸಾವಿರ ಅತಿಥಿ ಶಿಕ್ಷಕರನ್ನು  ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

2026-27ನೇ ಶೈಕ್ಷಣಿಕ ಸಾಲು ಮೇ ತಿಂಗಳಿನಿಂದಲೇ ಆರಂಭವಾಗುತ್ತಿರುವುದರಿಂದ, ಶಾಲೆಗಳ ಆರಂಭದಲ್ಲೇ ಶಿಕ್ಷಕರ ಕೊರತೆಯಾಗದಂತೆ ತಡೆಯಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳು11 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ಸಿಕ್ಕಿದೆ.

ಈ ನೇಮಕಾತಿಯು ಕೇವಲ ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಖಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಪ್ರಸ್ತುತ ಶೈಕ್ಷಣಿಕ ವರ್ಷದ (2026-27) ಅಂತ್ಯದವರೆಗೆ ಮಾತ್ರ ಅನ್ವಯಿಸುತ್ತದೆ.

ಶೈಕ್ಷಣಿಕ ವರ್ಷದ ಆರಂಭದಲ್ಲೇ ಅತಿಥಿ ಶಿಕ್ಷಕರು ಲಭ್ಯವಾಗುವುದರಿಂದ ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಮತ್ತು ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗೆ ಅನುಕೂಲವಾಗಲಿದೆ.

ಅತಿಥಿ ಶಿಕ್ಷಕರ ಗೌರವಧನ ಪಾವತಿಗೆ ಅಗತ್ಯವಿರುವ ಅನುದಾನದ ವಿವರ ಹಾಗೂ ಜಿಲ್ಲಾ/ತಾಲ್ಲೂಕುವಾರು ಹಂಚಿಕೆಯ ಸಂಪೂರ್ಣ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.


Spread the love

About Laxminews 24x7

Check Also

ಬೆಳಗಾವಿ| ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ

Spread the loveಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ  ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್  ಮನೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ