Breaking News

ಬಡವರ ಮತಗಳನ್ನು ತೆಗೆಯಲು SIR ಮೂಲಕ ಸಂಚು: ಡಿಕೆಶಿ ಕಿಡಿ

Spread the love

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು, ಬಿಎಲ್ಎಗಳಿಗೆ ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ನಾಗರಿಕರು ತಮ್ಮ ಮತವನ್ನು ಕಳೆದುಕೊಳ್ಳುತ್ತಾರೆ. ಬೇರೆ ರಾಜ್ಯಗಳಲ್ಲಿ ಇದೇ ರೀತಿ ಆಗಿದ್ದನ್ನು ನೋಡಿದ್ದೇವೆ. ಮತದಾನದ ಹಕ್ಕು ಹೋದರೆ ಪಿಂಚಣಿ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಅನೇಕ ಅನುಕೂಲಗಳಿಂದ ನಾಗರಿಕರು ವಂಚಿತರಾಗುತ್ತಾರೆ ಎಂದರು.


Spread the love

About Laxminews 24x7

Check Also

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

Spread the loveಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ