Breaking News

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ

Spread the love

ಕಲಬುರಗಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ  ಜಿಲ್ಲೆ ಚಿತ್ತಾಪುರ  ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ.

ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಲಾರಿ (Lorry) ಡಿಕ್ಕಿ ರಭಸಕ್ಕೆ ಕ್ರೂಸರ್  ನಜ್ಜುಗುಜ್ಜಾಗಿದೆ.

ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಧಾರವಾಡ ಪ್ರತ್ಯೇಕ ಪಾಲಿಕೆಗಾಗಿ ಪ್ರತಿಭಟನಾ ಮೆರವಣಿಗೆ

Spread the loveಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ ಹಾಗೂ ದೀಪಕ ಚಿಂಚೋರೆ ಅಭಿಮಾನಿ ಬಳಗದ ವತಿಯಿಂದ ಕಾಂಗ್ರೆಸ್​ ಮುಖಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ