Breaking News

ಕುಡಿದ ಮತ್ತಲ್ಲಿ ಟ್ರಾಫಿಕ್‌ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ವಿಡಿಯೋ ವೈರಲ್‌

Spread the love

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಇಬ್ಬರು ಯುವಕರು ಟ್ರಾಫಿಕ್ ಪೊಲೀಸರ  ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ  ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದಿದೆ.

ವಾಹನ ತಪಾಸಣೆ ವೇಳೆ ಇಬ್ಬರು ಯುವಕರನ್ನು ಟ್ರಾಫಿಕ್ ಪೊಲೀಸರು ತಡೆದಿದ್ದರು. ಈ ವೇಳೆ ಮದ್ಯಪಾನ ಮಾಡಿರುವ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ಸಿಟ್ಟಿಗೆದ್ದ ಯುವಕರು ಪೊಲೀಸರ ಮೇಲೆ ದರ್ಪ ತೋರಿದ್ದಾರೆ. ಮೈಕೈ ಮುಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾರೆ.

ಯುವಕರ ವರ್ತನೆ ಸಾರ್ವಜನಿಕರು ತಮ್ಮ ಮೊಬೈಲ್‍ನಲ್ಲಿ ಸೆರೆಯಾಗಿದೆ. ಹಲ್ಲೆಗೆ ಯತ್ನಿಸಿದವರು ಹುಬ್ಬಳ್ಳಿ ಗಾಂಧೀವಾಡಾ ನಿವಾಸಿಗಳೆಂದು ಮಾಹಿತಿ ಲಭ್ಯವಾಗಿದೆ. ಪುಂಡ ಯುವಕರ ವರ್ತನೆಗೆ ಸಾರ್ವಜನಿಕರು ಸಹ ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ