Breaking News

ಬಾದಾಮಿ ಅಗಸ್ತ್ಯ ಹೊಂಡದಲ್ಲಿ ಈಜಲು ಹೋದ ಯುವಕ ನಾಪತ್ತೆ

Spread the love

ಬಾಗಲಕೋಟೆ: ಜಿಲ್ಲೆಯ ಬಾದಾಮಿ ಪಟ್ಟಣದ ಐತಿಹಾಸಿಕ ಅಗಸ್ತ್ಯ ಹೊಂಡದಲ್ಲಿ ಈಜಲು ಹೋಗಿ 19 ವರ್ಷದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಬಾದಾಮಿಯ ಜಯನಗರ ನಿವಾಸಿ ಮನೋಜ್ ಪ್ರಕಾಶ್ ಕಂಬ್ಳೇಕರ್ (19) ನಾಪತ್ತೆಯಾದ ಯುವಕ. ಮನೋಜ್ ಹೊಂಡದ ಬದಿ ತನ್ನ ಬಟ್ಟೆಗಳನ್ನು ಕಳಚಿಟ್ಟು, ಈಜಲು ಹೊಂಡಕ್ಕೆ ಹಾರಿದ್ದಾನೆ ಎನ್ನಲಾಗಿದೆ. ಮನೋಜ್ ನೀರಿನಿಂದ ಮೇಲಕ್ಕೆ ಬರದೇ ಇದ್ದಾಗ ಸಾರ್ವಜನಿಕರು 112 ಪೊಲೀಸ್ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು ಯುವಕನ ಗುರುತು ಪತ್ತೆ ಹಚ್ಚಲು ಕುಟುಂಬಸ್ಥರ ಸಹಾಯ ಪಡೆದುಕೊಂಡಿದ್ದು, ಬಳಿಕ ನಾಪತ್ತೆಯಾಗಿರುವ ವ್ಯಕ್ತಿ ಮನೋಜ್ ಎಂದು ತಿಳಿದು ಬಂದಿದೆ.

ಪ್ರಸ್ತುತ ಅಗ್ನಿಶಾಮಕ ದಳದ ಠಾಣಾಧಿಕಾರಿಗಳ ತಂಡದೊಂದಿಗೆ ತೀವ್ರಗತಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಇದುವರೆಗೆ ಯುವಕನ ಶವ ಪತ್ತೆಯಾಗಿಲ್ಲ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ