Breaking News

ಸಂತೆಯಲ್ಲಿ ನುಗ್ಗಿ ಕಳ್ಳತನ: ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರು

Spread the love

ಗ್ರಾಮದಲ್ಲಿ  ವಾರದ ಸಂತೆಯ ವೇಳೆ ಜನಜಂಗುಳಿಯಲ್ಲಿ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಅಂತರರಾಜ್ಯ ಕಳ್ಳರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಶಮನವಾಡಿ ಗ್ರಾಮದಲ್ಲಿ ಎಂದಿನಂತೆ ವಾರದ ಸಂತೆ ನಡೆದಿತ್ತು. ಈ ವೇಳೆ ಸಾರ್ವಜನಿಕರ ಜನಸಂದಣಿಯನ್ನು ದುರುಪಯೋಗಪಡಿಸಿಕೊಂಡು ಜೇಬುಗಳ್ಳತನ ಹಾಗೂ ಸರಗಳ್ಳತನ ಮಾಡಲು ಯತ್ನಿಸುತ್ತಿದ್ದ ಐವರು ಕಳ್ಳರನ್ನು ಸ್ಥಳೀಯರು ಒಟ್ಟಿಗೆ ಸೇರಿಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸಂತೆ ಮೈದಾನಕ್ಕೆ ಧಾವಿಸಿದ ಸದಲಗಾ ಠಾಣೆಯ ಪೊಲೀಸರು, ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಈ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಂಧಿತರನ್ನು ಸುಜಾತಾ ಚೌಗಲಾ, ವನಿತಾ ರಾಕ್ ಪಸಾರೆ, ಸಾರಿಕಾ ಸಕಟ, ಜ್ಯೋತಿ ಹಾತಲಗೆ ಹಾಗೂ ನಾಮದೇವ ರಾಕಪಸಾರೆ ಎಂದು ಗುರುತಿಸಲಾಗಿದೆ. ಈ ಐವರ ಪೈಕಿ ನಾಲ್ವರು ನೆರೆಯ ಮಹಾರಾಷ್ಟ್ರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪ

Spread the loveಬೆಂಗಳೂರು: ಬಿಪಿಎಲ್  ಕಾರ್ಡ್‌ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ