Breaking News

ಕೋವಿಡ್ ಲ್ಯಾಬ್ ಆರಂಭಿಸಿ: ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪತ್ರ

Spread the love

ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

 

ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು ಎಲ್ಲ ತಾಲೂಕು ಆಸ್ಪತ್ರೆಯಲ್ಲಿಯೂ ಕೋವಿಡ್ ಸೆಂಟರ್ ಆರಂಭಿಸಿ, ಸಿಬ್ಬಂದಿಗಳ ನೇಮಕಾತಿ ಮಾಡಿಕೊಂಟು ಅಗತ್ಯ ಸಕಲರಣೆಗಳನ್ನು ಪೂರೈಸುವಂತೆ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಟೆಸ್ಟಿಂಗ್ ಲ್ಯಾಬ್ ಎರಡು ಮಾತ್ರವಿದ್ದು, ಇನ್ನು ಹೆಚ್ಚುವರಿಯಾಗಿ ಗೋಕಾಕ ಮತ್ತು ಚಿಕ್ಕೋಡಿಯಲ್ಲಿಯೂ ಲ್ಯಾಬ್ ಆರಂಭಿಸುವಂತೆ ಒತ್ತಾಯಿಸಿದ್ದಾರೆ.

ಆ್ಯಂಬುಲೆನ್ಸ್ ಗಳ ಕೊರೆತೆಯೂ ಇದ್ದು, ಎರಡು ನೂತನ ಆ್ಯಂಬುಲೆನ್ಸ್ ಗಳನ್ನು ಮಂಜೂರು ಮಾಡಬೇಕು. ಸರ್ಕಾರಿ ವಾಹನಗಳು ಲಭ್ಯವಿರದ ವೇಳೆ ಖಾಸಗಿ ವಾಹನಗಳನ್ನು ಪೂರೈಸಬೇಕು. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮಾಡಿದ್ದಾರ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ