Breaking News

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Spread the love

ಬೆಳಗಾವಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ  ಖಂಡಿಸಿ ಬೆಳಗಾವಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿದರು.‌

ಇಂದು ನಗರದ ಕನ್ನಡ ಸಾಹಿತ್ಯ ಭವನದಿಂದ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಲಾಯಿತು. ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ಸಂಸದ ಜಗದೀಶ್ ಶೆಟ್ಟರ್ ಕಚೇರಿಗೆ ನುಗ್ಗಲು ಯತ್ನಿಸಿದರು.

ಪೊಲೀಸರು ಬ್ಯಾರಿಕೇಟ್ ಹಾಕಿ ಪ್ರತಿಭಟನಾಕಾರರನ್ನು ತಡೆದರು.‌ ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.‌

ಪೊಲೀಸರು ಸಂಸದ ಕಚೇರಿ ಬಳಿ ಪ್ರತಿಭಟನೆಗೆ ಅವಕಾಶ ಕೊಡದ ಹಿನ್ನೆಲೆ ರಸ್ತೆಯ ಮೇಲೆ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೋರಹಾಕಿದರು.‌ ಈ ವೇಳೆ 20 ಕ್ಕೂ ಅಧಿಕ ಯುಥ್ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.


Spread the love

About Laxminews 24x7

Check Also

ಖೋಟಾ ನೋಟು ಚಲಾವಣೆಗೆ ಯತ್ನ – ಇಬ್ಬರು ಅರೆಸ್ಟ್‌

Spread the loveಚಿಕ್ಕಮಗಳೂರು: ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಮೂಡಿಗೆರೆ  ಬಳಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ  ಮಹಮದ್ ಅಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ