Breaking News

ಇಂದು ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ; ಎಲ್ಲಾ ಗೊಂದಲ ಎಂಡ್ ಆಗುತ್ತೆ ಎಂದ ಸತೀಶ್ ಜಾರಕಿಹೊಳಿ

Spread the love

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಕಾಳಗದ ನಡುವೆ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಿದ್ದಾರೆ.

ನಿನ್ನೆ ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಲಿದ್ದು, ನಾಳೆ ಬೆಳಿಗ್ಗೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ನಾಳೆ ಕಾಂಗ್ರೆಸ್ ನಲ್ಲಿನ ಅಧಿಕಾರ ಹಂಚಿಕೆ ಗೊಂದಲ, ನಾಯಕರ ಹೇಳಿಕೆಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬೆಳವಣಿಗೆ ನಡುವೆ ಸಚಿವ ಸತೀಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ. ಎಲ್ಲಾ ಗೊಂದಲಗಳಿಗೆ ತೆರೆ ಬೀಳಲಿದೆ. ಮುಹೂರ್ತ ಅಷ್ಟೇ ಫಿಕ್ಸ್ ಆಗಿದೆ. ಆದರೆ ಅವರ ಅಜೆಂಡಾ ಏನು ಎಂಬುದು ಗೊತ್ತಿಲ್ಲ. ಅಲ್ಲಿ ಏನು ಚರ್ಚೆ ಆಗುತ್ತದೆ ಎಂಬುದರ ಬಗ್ಗೆಯೂ ಮಾಹಿತಿ ಇಲ್ಲ. ನಾಳೆ ಏನಾಗಲಿದೆ ಎಂಬುದನ್ನು ಕಾದುನೋಡಬೇಕು ಎಂದು ಹೇಳಿದರು.

ನಾವು ಕಾಂಗ್ರೆಸ್ ನಲ್ಲಿನ ಗೊಂದಲಗಳಿಗೆ ತೆರೆ ಎಳೆಯುವಂತೆ ಹೇಳುತ್ತಿದ್ದೆವು. ಹಾಗಾಗಿ ನಾಳೆ ಬೆಳಿಗ್ಗೆ ಹೈಕಮಾಂಡ್ ನಾಯಕರು ಮುಹೂರ್ತ್ ಫಿಕ್ಸ್ ಮಾಡಿದ್ದಾರೆ. ಚರ್ಚೆ ಮಾಡಲಿದ್ದಾರೆ. ನಾಳೆ ಎಲ್ಲಾ ಗೊಂದಗಳಿಗೆ, ನಾಯಕರ ಅನಾವಶ್ಯಕ ಹೇಳಿಕೆಗಳಿಗೆ ಬ್ರೇಕ್ ಬೀಳಲಿದೆ ಎಂಬ ನಿರೀಕ್ಷೆ ಇದೆ ಎಂದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ