Breaking News

ರಾಮದುರ್ಗದಲ್ಲಿ ₹15 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗ್ರಾಮ ಪಂಚಾಯತಿ ಅಧಿಕಾರಿ..!

Spread the love

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ತಾಂಡವ ಮಿತಿಮೀರಿ ನಡೆಯುತ್ತಿದೆ ಅದಕ್ಕೆ ಸಾಕ್ಷಿ ಎಂಬಂತೆ ಬೆಳಗಾವಿಯಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗ್ರಾಮ ಪಂಚಾಯತಿ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪೂರ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ.
ಆಸ್ತಿ ರಜಿಸ್ಟರ್‌ನಲ್ಲಿ ಮನೆ, ಅಂಗಡಿ ಹಾಗೂ ಪಕ್ಕದ ಖಾಲಿ ಜಾಗವನ್ನು ನಮೂದಿಸಲು ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಮಹಾಂತೇಶ ಬಳ್ಳಾರಿ, ಮೊದಲ ಕಂತಾಗಿ ₹15 ಸಾವಿರ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇಷ್ಟೇ ಅಲ್ಲದೆ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಸರ್ಕಾರಿ ನೌಕರರು ಹಾಗೂ ಅರೆಕಾಲಿಕ ಸಿಬ್ಬಂದಿಗಳು ಸಣ್ಣಪುಟ್ಟ ಕಾರ್ಯಗಳಿಗೂ ಲಂಚ ತೆಗೆದುಕೊಳ್ಳುತ್ತಾರೆ ಎಂಬ ಆರೋಪ ಗ್ರಾಮಸ್ಥರು ಮಾಡಿದ್ದಾರೆ ಆದಷ್ಟು ಬೇಗ ಇಲ್ಲಿನ ಭ್ರಷ್ಟಾಚಾರವನ್ನು ಹೋಗಲಾಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ


Spread the love

About Laxminews 24x7

Check Also

ಖೋಟಾ ನೋಟು ಚಲಾವಣೆಗೆ ಯತ್ನ – ಇಬ್ಬರು ಅರೆಸ್ಟ್‌

Spread the loveಚಿಕ್ಕಮಗಳೂರು: ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಮೂಡಿಗೆರೆ  ಬಳಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ  ಮಹಮದ್ ಅಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ