Breaking News

ಕೂಲಿ ಕಾರ್ಮಿಕರಿಗೆ ಇ ಕೆವೈಸಿ ಕಡ್ಡಾಯ ; ಸಂಗೂರ ಗ್ರಾಮದಲ್ಲಿ ತಾಪಂ ಇಒ ಡಾ.ಪರಮೇಶ ಹುಬ್ಬಳ್ಳಿ

Spread the love

ಹಾವೇರಿ: ತಾಲೂಕಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ತಿಗಳ ಸೃಜನೆ ಮಾಡಲಾಗುತ್ತಿದೆ. ಎಲ್ಲ ಕೂಲಿಕಾರರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ ಎಂದು ಹಾವೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪರಮೇಶ ಹುಬ್ಬಳ್ಳಿ ಕರೆ ನೀಡಿದರು ತಾಲೂಕಿನ ಸಂಗೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಪನಕಟ್ಟಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿ, ರೋಜ್‌ಗಾರ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ನರೇಗಾ ಯೋಜನೆಯಿಂದ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ನೀಡುವುದರ ಜತೆಗೆ ವಲಸೆ ಹೋಗುವುದನ್ನು ತಡೆಗಟ್ಟಲಾಗುತ್ತಿದೆ. ನರೇಗಾ ಯೋಜನೆ ಕೂಲಿಬೇಡಿಕೆ ಆಧಾರಿತ ಕಾರ್ಯಕ್ರಮವಾಗಿದೆ. ಸ್ಥಳೀಯವಾಗಿ ಗ್ರಾಮ ಪಂಚಾಯಿತಿ ಮೂಲಕ ನರೇಗಾ ಯೋಜನೆ ಅಡಿ ಕೂಲಿ ಕೆಲಸ ನೀಡಲಾಗುವುದು. ಯೋಜನೆ ಅಡಿಯಲ್ಲಿ ವೈಯಕ್ತಿಕ ಕಾಮಗಾರಿಗಳಾದ ರೇಷ್ಮೆ ಕೃಷಿ, ಕೃಷಿ ಹೊಂಡ, ಬದು ನಿರ್ಮಾಣ, ತೆಂಗು, ಪೇರಲ, ಗುಲಾಬಿ ಕೃಷಿ, ದನದ ಕೊಟ್ಟಿಗೆ ನಿರ್ಮಾಣ, ಇತ್ಯಾದಿ ಕಾಮಗಾರಿಗಳನ್ನು ಮಾಡಿಕೊಳ್ಳಲು ಅವಕಾಶವಿದೆ ಎಂದರು. ತಾಲೂಕು ಪಂಚಾಯಿತಿ ಐಇಸಿ ಸಂಯೋಜಕ ಗಿರೀಶ ಬೆನ್ನೂರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ, ಗ್ರಾಮಸ್ಥರು, ಕೂಲಿಕಾರರು ಇದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ