Breaking News

4,500 ಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಾನಂದ ನೀಲಣ್ಣವರ್ ಪರ ಜಾಮೀನು ಅರ್ಜಿ ಸಲ್ಲಿಕೆ

Spread the love

ಬೆಳಗಾವಿ: 4,500 ಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಾನಂದ ನೀಲಣ್ಣವರ್ ಪರ ಜಾಮೀನು ಅರ್ಜಿ ಸಲ್ಲಿಸಲಾಗಿದೆ ಎಂದು ಅವರ ಪರ ವಕೀಲ ಆರ್.ಪಿ. ಪಾಟೀಲ್ ತಿಳಿಸಿದ್ದಾರೆ.
ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮೀನು ಅರ್ಜಿ ವಿಚಾರಣೆ ಜೂನ್ 1ರಂದು ನಡೆಯಲಿದ್ದು, ನ್ಯಾಯಾಲಯವು ನೀಲಣ್ಣವರ್ ಅವರನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಹೇಳಿದರು.
ಇಲ್ಲಿಯವರೆಗೆ ನೀಲಣ್ಣವರ್ ವಿರುದ್ಧ ಯಾರೂ ನೇರವಾಗಿ ದೂರು ನೀಡಿಲ್ಲ. ಕಾಗವಾಡದಲ್ಲಿ ಒಬ್ಬರು ದೂರು ನೀಡಿರುವ ಬಗ್ಗೆ ಮಾಹಿತಿ ದೊರೆತಿದ್ದು, ಅದರ ಕುರಿತು ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.
ಮೊದಲು ನೀಲಣ್ಣವರ್ ಅವರಿಗೆ ಜಾಮೀನು ದೊರಕಿಸುವ ಪ್ರಯತ್ನ ಮಾಡಲಾಗುವುದು. ನಂತರ ದಾಖಲಾದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ವಕೀಲ ಆರ್.ಪಿ. ಪಾಟೀಲ್ ಹೇಳಿದರು.


Spread the love

About Laxminews 24x7

Check Also

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ – ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ

Spread the loveಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ  ಅವರು ಇಂದೇ ಜಾತಿಗಣತಿ  ವರದಿ ಸ್ವೀಕರಿಸಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ