Breaking News

ಗೋಕಾಕ:ಮದುವೆಯಾದ 18 ದಿನಗಳಲ್ಲೇ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

Spread the love

ಶಿವಮೊಗ್ಗ : ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) 8ನೇ ಪಡೆಯ ಕಾನ್ಸ್‌ಟೇಬಲ್ ಈರಣ್ಣ ಗುಡಾದಾರ್ (26) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೃತ ಈರಣ್ಣ ಗುಡಾದಾರ್ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕೆಎಸ್‌ಆರ್‌ಪಿ 8ನೇ ಪಡೆಯಲ್ಲಿ ಪೊಲೀಸ್‌ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಕರ್ತವ್ಯದ ಅವಧಿಯಲ್ಲೇ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತ ಸಂಭವಿಸಿದೆ.

ಇದನ್ನು ಗಮನಿಸಿದ ಸಹೋದ್ಯೋಗಿಗಳು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರಾದರೂ, ದುರದೃಷ್ಟವಶಾತ್ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಅತ್ಯಂತ ದುಃಖದ ಸಂಗತಿಯೆಂದರೆ, ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ಅದ್ಧೂರಿಯಾಗಿ ವಿವಾಹವಾಗಿತ್ತು.


Spread the love

About Laxminews 24x7

Check Also

ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ.ಬಿ ಪಾಟೀಲ್

Spread the loveಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ