Breaking News

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ದಿನೇಶ್ ಗುಂಡೂರಾವ್ ಸ್ಪಷ್ಟನೆ

Spread the love

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಸಚಿವ ದಿನೇಶ್ ಗುಂಡೂರಾವ್  ಸ್ಪಷ್ಟಪಡಿಸಿದ್ದಾರೆ.

ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು.

ಇದೀಗ ಲ್ಯಾಬ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನ

Spread the loveಬೆಂಗಳೂರು: ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ  ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು  ಪ್ರಮುಖ ಆರೋಪಿ ಪುಣ್ಯೇಶ್‌ನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ