Breaking News

ಕೆಪಿಸಿಸಿ ಸಾರಥ್ಯ ಸಚಿವ ಸತೀಶ್‌ ಜಾರಕಿಹೊಳಿಗೆ ನೀಡಿದರೆ ಸೂಕ್ತವೆಂದ ಬೆಳಗಾವಿ ಶಾಸಕರು

Spread the love

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಅತ್ಯಂತ ಸೂಕ್ತ ಎಂದು ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಅಭಿಪ್ರಾಯಪಟ್ಟಿದ್ದಾರೆ.
ಆದರೆ, ಶೀಘ್ರದಲ್ಲೇ ನಡೆಯಲಿದೆ ಎನ್ನಲಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಗಾದಿಯ ಕುರಿತು ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ ಜಾರಕಿಹೊಳಿ ಅವರು ಪಕ್ಷದ ಅತ್ಯಂತ ಹಿರಿಯ, ಅನುಭವಿ ಮತ್ತು ಪ್ರಭಾವಿ ನಾಯಕರಾಗಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಅವರಿಗೆ ಕೆಪಿಸಿಸಿ ಸಾರಥ್ಯ ನೀಡಿದರೆ ಪಕ್ಷದ ಸಂಘಟನೆಗೆ ದೊಡ್ಡ ಬಲ ಸಿಗಲಿದೆ ಎಂದು ವಿಶ್ವಾಸ ವೈದ್ಯ ಬೆಂಬಲ ಸೂಚಿಸಿದರು.

ಸಿಎಲ್‌ಪಿ ಸಭೆಯ ಬಗ್ಗೆ ಅಸ್ಪಷ್ಟತೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ ರೆಯಲಾಗಿದೆ ಎಂಬ ವದಂತಿಗಳ ಕುರಿತು ಉತ್ತರಿಸಿದ ಶಾಸಕರು, “ಈ ಸಭೆಯ ಬಗ್ಗೆ ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಸಭೆಯ ನೋಟಿಸ್ ಅಥವಾ ಆಮಂತ್ರಣ ನಮಗೆ ಇನ್ನು ತಲುಪಿಲ್ಲ” ಎಂದು ಸ್ಪಷ್ಟನೆ ನೀಡಿದರು.
ಹೈಕಮಾಂಡ್ ನಿರ್ಧಾರವೇ ಅಂತಿಮ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ಹಾಗೂ ಸಚಿವ ಸಂಪುಟ ಪುನಾರಚನೆಯಂತಹ ಪ್ರಮುಖ ರಾಜಕೀಯ ತೀರ್ಮಾನಗಳನ್ನು ಎಐಸಿಸಿ ವರಿಷ್ಠರು ತೆಗೆದುಕೊಳ್ಳಲಿದ್ದಾರೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಅವರು ಹೇಳಿದರು.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಆಸೀಫ್‌ ಸೇಠ್‌, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ವಹಿಸಿಕೊಂಡರೆ ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ವೇಗ ಸಿಗಲಿದೆ. ಸತೀಶ್ ಜಾರಕಿಹೊಳಿ ಅವರು ತಳಮಟ್ಟದಿಂದ ಪಕ್ಷವನ್ನು ಬಲಪಡಿಸಿದ ಅನುಭವ ಹೊಂದಿದ್ದಾರೆ. ಅವರು ಪೂರ್ಣಾವಧಿ ಅಧ್ಯಕ್ಷರಾದರೆ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಕ್ರಿಯಾತ್ಮಕವಾಗಿ ಮುನ್ನಡೆಸಬಹುದು ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಅಧಿಕಾರದ ಹಿಂದೆ ಹೋದವನಲ್ಲ, ಆಸ್ತಿ-ಹಣದ ಹಿಂದೆ ಬಿದ್ದಿಲ್ಲ: ಸಿದ್ದರಾಮಯ್ಯ ನೇರ ನುಡಿ

Spread the loveಬೆಂಗಳೂರು: ನಾನು ಯಾವತ್ತಿಗೂ ಸಿದ್ಧಾಂತ, ಮೌಲ್ಯಗಳಲ್ಲಿ ರಾಜೀ ಮಾಡಿಕೊಂಡಿಲ್ಲ. ಅಧಿಕಾರದ ಹಿಂದೆ ಹೋದವನಲ್ಲ, ಆಸ್ತಿ ಹಣದ ಹಿಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ