Breaking News

ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Spread the love

ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ, ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮ ಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದಾರೆ. ಅವರು ನಮ್ಮ ನಾಯಕರು, ಪ್ರಶ್ನಾತೀತ ನಾಯಕರು. ಅವರ ನಾಯಕತ್ವ, ಮಾರ್ಗದರ್ಶನ ಮುಂದೆಯೂ ಇರುತ್ತದೆ ಎಂದು ಹೇಳಿದರು.

ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ, ಪಕ್ಷ ಇದೆ, ಹೈಕಮಾಂಡ್ ನಾಯಕರು ಇದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ನಾಯಕರ ಆಯ್ಕೆ ನಡೆಯುತ್ತದೆ. ಪಕ್ಷದಲ್ಲಿ ಅದಕ್ಕೊಂದು ವ್ಯವಸ್ಥೆ ಇದೆ, ಅದರಂತೆ ನಡೆಯುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ