Breaking News

ಟ್ರೇಡಿಂಗ್ ಹೆಸರಿನಲ್ಲಿ ರೈತನಿಗೆ 9.91 ಲಕ್ಷ ರೂ. ವಂಚನೆ – ಕೇಸ್ ದಾಖಲು

Spread the love

ಶಿವಮೊಗ್ಗ: ಷೇರು ಮಾರುಕಟ್ಟೆ ಟ್ರೇಡಿಂಗ್‌ನಲ್ಲಿ  ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ, ಕೃಷಿಕರೊಬ್ಬರಿಂದ 9.91 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

ಕಳೆದ ಮಾರ್ಚ್‌ನಲ್ಲಿ ವಾಟ್ಸಪ್ ನೋಡುತ್ತಿದ್ದಾಗ, ಅಪರಿಚಿತರು ಇವರ ಮೊಬೈಲ್ ಸಂಖ್ಯೆಯನ್ನು ವಿಐಪಿ ಹೆಸರಿನ ವಾಟ್ಸಪ್ ಗ್ರೂಪ್‌ವೊಂದಕ್ಕೆ ಸೇರಿಸಿದ್ದರು. ಆ ಗ್ರೂಪ್‌ನಲ್ಲಿ ಟ್ರೇಡಿಂಗ್ ಕಂಪನಿಯೊಂದರ ಹೆಸರಿನಲ್ಲಿ ಮೆಸೇಜ್‌ಗಳನ್ನು ಕಳುಹಿಸಲಾಗಿತ್ತು. ಕಂಪನಿಯ ಪ್ರತಿನಿಧಿಗಳಂತೆ ನಟಿಸಿದ ವಂಚಕರು, ತಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ಅತಿಹೆಚ್ಚು ಲಾಭಗಳಿಸಿ ಕೊಡುವುದಾಗಿ ನಂಬಿಸಿದ್ದರು.

ಇದನ್ನು ನಿಜವೆಂದು ನಂಬಿದ ಕೃಷಿಕ, ಮಾರ್ಚ್ 20ರಿಂದ ಮೇ15ರ ಅವಧಿಯಲ್ಲಿ ವಂಚಕರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ನಾಲ್ಕು ಹಂತಗಳಲ್ಲಿ ಒಟ್ಟು 9,91,081 ರೂ. ಹಣ ವರ್ಗಾವಣೆ ಮಾಡಿದ್ದರು. ನಂತರ ತಮ್ಮ ಖಾತೆಯಲ್ಲಿದ್ದ ಹಣವನ್ನು ವಿತ್‌ಡ್ರಾ ಮಾಡಲು ಯತ್ನಿಸಿದಾಗ, ಒಟ್ಟು ಮೊತ್ತದ ಶೇ.20ರಷ್ಟು ಹಣವನ್ನು ಕಮಿಷನ್ ರೂಪದಲ್ಲಿ ಮುಂಚಿತವಾಗಿ ಪಾವತಿಸುವಂತೆ ವಂಚಕರು ಷರತ್ತು ವಿಧಿಸಿ ವೆಬ್ ಪೇಜ್ ಬಂದ್ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಮೋಸ ಹೋಗಿರುವುದು ಅರಿವಾದ ಹಿನ್ನೆಲೆ ಬೆಂಗಳೂರಿನಲ್ಲಿರುವ ಆ ಕಂಪನಿಯ ಅಧಿಕೃತ ನಂಬರ್‌ಗೆ ಕರೆಮಾಡಿ ವಿಚಾರಿಸಿದ್ದಾರೆ. ಈ ವೇಳೆ ಕಂಪನಿ ಹೆಸರು ದುರ್ಬಳಕೆ ಮಾಡಿಕೊಂಡು ಸೈಬರ್ ಕಳ್ಳರು, ಈ ಕೃತ್ಯ ಎಸಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಎಲ್ ನಿನೋ ಎಫೆಕ್ಟ್ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

Spread the loveಬೆಂಗಳೂರು: ಎಲ್‌ನಿನೋ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ