Breaking News

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣ ಸ್ವೀಕಾರ – ಸಾರ್ವಜನಿಕರಿಗಿಲ್ಲ ಪ್ರವೇಶ

Spread the love

ಬೆಂಗಳೂರು: ಲೋಕಭವನದ  ಗ್ಲಾಸ್‌ಹೌಸ್‌ನಲ್ಲಿ ಬುಧವಾರ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌  ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೆ.ಸಿ ಚಂದ್ರಶೇಖರ್‌ ತಿಳಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್‌ 3 ರಂದು ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗಿದೆ. ಅದೇ ದಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಪ್ರಮಾಣ ಸ್ವೀಕಾರ ಸಮಾರಂಭ ನಡೆಯಲಿದೆ ಎಂದರು.

ಆರಂಭದಲ್ಲಿ ಬೇರೆ ಬೇರೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನ ಕರೆದುಕೊಂಡು ಬರಬೇಕು, ಅದಕ್ಕಾಗಿ ಬಸ್‌ ಬುಕಿಂಗ್‌ ಮಾಡಬೇಕು ಅಂತ ತೀರ್ಮಾನ ಮಾಡಲಾಗಿತ್ತು. ಆದ್ರೆ ಕಾರಣಾಂತರದಿಂದ ಈಗ ಆಡಂಬರ ಬೇಡ ಅನ್ನೋ ತೀರ್ಮಾನ ಮಾಡಿದ್ದೇವೆ. ಸರಳವಾಗಿ ಕಾರ್ಯಕ್ರಮ ನಡೆಸುತ್ತೇವೆ. ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಆಡಂಬರ ಬೇಡ, ಒಂದೊಳ್ಳೆ ಸರ್ಕಾರ ಕೊಡೋಣ ಅಂತ ಪಕ್ಷದಿಂದ ತೀರ್ಮಾನ ಮಾಡಿದ್ದೇವೆ. ಅದಕ್ಕಾಗಿ ಸಾರ್ವಜನಿಕರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಾರದಂತೆ ಮನವಿ ಮಾಡ್ತಿದ್ದೇವೆ ಎಂದು ವಿವರಿಸಿದರು.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ