Breaking News

ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

Spread the love

ಧಾರವಾಡ: ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ  ಗ್ರಾಮದಲ್ಲಿ ನಡೆದಿದೆ.

ಸುಭಾನಿ ಬಾಬೊಜಿಕೊಪ್ಪ (12), ಮೆಹಬೂಬ ಒಟ್ನಾಳ (16), ಅನ್ವರ್ ಒಟ್ನಾಳ (14) ಸಾವನ್ನಪ್ಪಿದ ಬಾಲಕರು. ಮಧ್ಯಾಹ್ನ ಗ್ರಾಮದ ಪಕ್ಕದಲ್ಲಿ ಇರುವ ಕೆರೆಗೆ ಮೂವರು ಬಾಲಕರು ಈಜಲು ಹೋಗಿದ್ದರು. ಈ ವೇಳೆ ಕೆರೆಯ ಮಧ್ಯಭಾಗದಲ್ಲಿ ಹೋಗಿದ್ದ ಬಾಲಕರು ಈಜಲು ಆಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸದ್ಯ ಮೂವರು ಬಾಲಕರ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ